Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:44 - ಕನ್ನಡ ಸತ್ಯವೇದವು J.V. (BSI)

44 ಏಳನೆಯ ಸಾರಿ ಸೇವಕನು - ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ - ನೀನು ಹೋಗಿ ಅಹಾಬನಿಗೆ - ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು ಎಂದು ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಏಳನೆಯ ಸಾರಿ ಆ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ,” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು, ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಏಳನೆಯ ಸಲ, ಸೇವಕನು ಹಿಂದಿರುಗಿ ಬಂದು, “ಒಬ್ಬ ಮನುಷ್ಯನ ಮುಷ್ಟಿ ಗಾತ್ರದ ಚಿಕ್ಕ ಮೋಡವನ್ನು ನಾನು ನೋಡಿದೆನು. ಆ ಮೋಡವು ಸಮುದ್ರದಿಂದ ಬರುತ್ತಿದೆ” ಎಂದನು. ಎಲೀಯನು ಸೇವಕನಿಗೆ, “ರಾಜನಾದ ಅಹಾಬನ ಬಳಿಗೆ ಹೋಗಿ, ತನ್ನ ರಥವನ್ನು ಸಿದ್ಧಗೊಳಿಸಿ ಈಗಲೇ ಮನೆಗೆ ಹೋಗುವಂತೆ ಅವನಿಗೆ ಹೇಳು, ಅವನೀಗ ಬಿಟ್ಟುಹೋಗದಿದ್ದರೆ, ಮಳೆಯು ಅವನನ್ನು ತಡೆಯುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಏಳನೆಯ ಸಾರಿ ಇವನು ಹೋಗಿ ನೋಡಿದಾಗ, “ಇಗೋ, ಸಮುದ್ರದಿಂದ ಒಂದು ಮನುಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತಿದೆ,” ಎಂದನು. ಆಗ, “ನೀನು ಹೋಗಿ ಅಹಾಬನಿಗೆ ಬೇಗನೇ ರಥವನ್ನು ತೆಗೆದುಕೊಂಡು ಮಳೆಯು ನಿನ್ನನ್ನು ತಡೆಯದಂತೆ ಇಳಿದುಹೋಗೆಂದು ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:44
7 ತಿಳಿವುಗಳ ಹೋಲಿಕೆ  

ಇದಲ್ಲದೆ ಆತನು ಜನರೆಲ್ಲರಿಗೂ ಹೇಳಿದ್ದೇನಂದರೆ - ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ; ಹಾಗೇ ಆಗುತ್ತದೆ.


ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವದು.


ಈ [ದೀಪಗಳಿಂದ ಸೂಚಿತವಾದ] ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವದನ್ನು ಸಂತೋಷದಿಂದ ನೋಡುತ್ತವೆ; ಹೀಗಿರುವಲ್ಲಿ ಅಲ್ಪಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಾರು?


ಲಾಕೀಷಿನವರೇ, ಅಶ್ವಗಳನ್ನು ರಥಕ್ಕೆ ಕಟ್ಟಿರಿ; ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ; ಹೌದು, ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.


ಅದೇ ಪ್ರಕಾರ ಫಿಲಿಷ್ಟಿಯರು ಹಾಲು ಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿ


ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿ ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು


ಅವನು ತನ್ನ ಸೇವಕನಿಗೆ - ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು ಏನೂ ತೋರುವದಿಲ್ಲ ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು