Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:45 - ಕನ್ನಡ ಸತ್ಯವೇದವು J.V. (BSI)

45 ತುಸುಹೊತ್ತಿನಲ್ಲಿಯೇ ಆಕಾಶವು ಮೋಡ ಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕೂತುಕೊಂಡು ಇಜ್ರೇಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ತುಸು ಹೊತ್ತಿನಲ್ಲಿಯೇ ಆಕಾಶವು ಕಾರ್ಮೋಡಗಾಳಿಗಳಿಂದ ತುಂಬಿ ದೊಡ್ಡ ಮಳೆ ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಜೆಸ್ರೀಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಸ್ವಲ್ಪ ಹೊತ್ತಿನಲ್ಲಿಯೇ, ಆಕಾಶವು ಕಪ್ಪಾದ ಮೋಡಗಳಿಂದ ಕವಿದುಕೊಂಡಿತು. ಗಾಳಿಯು ಬೀಸಲಾರಂಭಿಸಿತು ಮತ್ತು ಬಿರುಸಾದ ಮಳೆಯು ಸುರಿಯಲಾರಂಭಿಸಿತು. ಅಹಾಬನು ತನ್ನ ರಥವನ್ನೇರಿ, ಇಜ್ರೇಲಿಗೆ ಪ್ರಯಾಣ ಮಾಡಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆಗ ಇದ್ದಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ, ಗಾಳಿಯಿಂದಲೂ ಕಪ್ಪಾಗಿ ದೊಡ್ಡಮಳೆಯು ಉಂಟಾಯಿತು. ಅಹಾಬನು ರಥದಲ್ಲಿ ಏರಿ ಇಜ್ರೆಯೇಲ್ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:45
12 ತಿಳಿವುಗಳ ಹೋಲಿಕೆ  

ಅನಂತರ ಅವನು ರಥದಲ್ಲಿ ಕೂತು ಇಜ್ರೇಲಿಗೆ ಹೋಗುವದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನೂ ಅವನನ್ನು ನೋಡುವದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದರು.


ಇದಲ್ಲದೆ ಆತನು ಈಜೆಬೆಲಳನ್ನು ಕುರಿತು - ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು;


ಅನಂತರ ಸಂಭವಿಸಿದ್ದೇನಂದರೆ - ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷೇತೋಟವಿತ್ತು.


ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತಿಯಾಯಿತು.


ಇಜ್ರೇಲ್, ಕೆಸುಲ್ಲೋತ್,


ಅವರು ತಿರಿಗಿ ಯೆಹೋಶುವನಿಗೆ - ನಮ್ಮ ಪರ್ವತಪ್ರದೇಶವು ನಮಗೆ ಸಾಲುವದಿಲ್ಲ; ಬೇತ್‍ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ತಗ್ಗಿನಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸುವ ಕಾನಾನ್ಯರೆಲ್ಲರಿಗೆ ಕಬ್ಬಿಣದ ರಥಗಳಿವೆ ಅನ್ನಲು


ಆ ಇಸ್ರಾಯೇಲ್ಯನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಹೊಕ್ಕು ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲ್ಯನನ್ನೂ ಆ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರಾಯೇಲ್ಯರಿಗುಂಟಾಗಿದ್ದ ವ್ಯಾಧಿ ನಿಂತುಹೋಯಿತು.


ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್, ಬೆನ್ಯಾಮೀನ್ ಇವುಗಳ ಜನರ ಮೇಲೆಯೂ ಬೇರೆ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಅರಸನನ್ನಾಗಿ ಮಾಡಿದನು.


ತಿರಿಗಿ ಅವನು ಪ್ರಾರ್ಥನೆಮಾಡಲು ಆಕಾಶವು ಮಳೆಗರೆಯಿತು, ಭೂವಿುಯು ಬೆಳೆಯಿತು.


ಇಷ್ಟರಲ್ಲಿ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಆತನು ದಂಡನೆಗಾಗಲಿ ತನ್ನ ಭೂವಿುಯ ಹಿತಕ್ಕಾಗಲಿ ಕೃಪೆದೋರುವದಕ್ಕಾಗಲಿ ಆ ಮೇಘಗಳನ್ನು ಬರಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು