Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:46 - ಕನ್ನಡ ಸತ್ಯವೇದವು J.V. (BSI)

46 ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಸರ್ವೇಶ್ವರನ ಹಸ್ತ ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಜೆಸ್ರೀಲನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:46
15 ತಿಳಿವುಗಳ ಹೋಲಿಕೆ  

ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ ಯಾಜಕನೂ ಆದ ಯೆಹೆಜ್ಕೇಲನಿಗೆ ಸಾಕ್ಷಾತ್ತಾಗಿ ಒದಗಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.)


ಈಗ ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರಕೊಂಡು ಬನ್ನಿರಿ ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.)


ಅವರು - ಕೈಸರನದು ಅಂದರು. ಆಗ ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಕಂಗೆಡಬೇಡ; ಕಂಗೆಟ್ಟರೆ ನಾನೂ ನಿನ್ನನ್ನು ಅವರ ಮುಂದೆ ಕಂಗೆಡಿಸುವೆನು.


ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗಂದನು -


ಪ್ರವಾದಿಯಾದ ಎಲೀಷನು ಪ್ರವಾದಿ ಮಂಡಲಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ - ನಡುಕಟ್ಟಿ ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗು.


ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು


ಆಗ ಎಲೀಷನು ಗೇಹಜಿಗೆ - ನೀನು ನಡು ಕಟ್ಟಿಕೊಂಡು ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮೋರೆಯ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಅವರ ವಂದನೆಯನ್ನೂ ಸ್ವೀಕರಿಸಬೇಡ ಎಂದು ಹೇಳಿ ಕಳುಹಿಸಿದನು.


ನೀವು ದೇವರ ದಾಸರಾಗಿದ್ದೀರಲ್ಲಾ. ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಸನ್ಮಾನಿಸಿರಿ.


ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.


ಅನಂತರ ಸಂಭವಿಸಿದ್ದೇನಂದರೆ - ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷೇತೋಟವಿತ್ತು.


ನಡುವಿಗೆ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು ತೋಳುಗಳನ್ನು ಶಕ್ತಿಗೊಳಿಸುವಳು.


ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು ಎಂದು ಉತ್ತರಕೊಟ್ಟರು. ಅದಕ್ಕೆ ಅರಸನು - ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು