Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:5 - ಕನ್ನಡ ಸತ್ಯವೇದವು J.V. (BSI)

5 ಅಹಾಬನು ಅವನಿಗೆ - ನಾವು ದೇಶಸಂಚಾರಮಾಡುತ್ತಾ ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವವು; ಇಲ್ಲವಾದರೆ ಎಲ್ಲಾ ಸತ್ತುಹೋಗುವವು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5-6 ಅಹಾಬನು ಅವನಿಗೆ, “ನಾವು ದೇಶಸಂಚಾರಮಾಡುತ್ತಾ ಎಲ್ಲಾ ಹಳ್ಳ ಬುಗ್ಗೆಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವುದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವುವು; ಆಗ ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿ ಸಂಚಾರಕ್ಕಾಗಿ ನಾಡನ್ನು ಎರಡು ಭಾಗಮಾಡಿ, ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ, ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:5
11 ತಿಳಿವುಗಳ ಹೋಲಿಕೆ  

ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಭ್ರಮೆಗೊಂಡಿವೆ, ಕುರಿಯ ಹಿಂಡುಗಳು ದಂಡನೆಗೆ ಗುರಿಯಾಗಿವೆ.


ಆಹಾ, ಅಂಜೂರವು ಚಿಗುರದಿದ್ದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರವನ್ನು ಕೊಡದೆಹೋದರೂ ಹಿಂಡು ಹಟ್ಟಿಯೊಳಗಿಂದ ನಾಶವಾದರೂ ಮಂದೆಯು ಕೊಟ್ಟಿಗೆಗಳೊಳಗೆ ಇಲ್ಲದಿದ್ದರೂ


ಭೂಜಂತುಗಳೇ, ಅಂಜಬೇಡಿರಿ; ಕಾಡಿನ ಕಾವಲಲ್ಲಿ ಹುಲ್ಲು ಮೊಳೆಯುವದು, ಮರವು ಹಣ್ಣುಬಿಡುವದು, ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.


ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನೂ


(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಸಂಚಾರಕ್ಕಾಗಿ ದೇಶವನ್ನು ಎರಡು ಭಾಗಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ಭೂಜಂತುಗಳೂ ನಿನ್ನ ಕಡೆಗೆ ತಲೆಯೆತ್ತುತ್ತವೆ; ತೊರೆಗಳು ಬತ್ತಿಹೋಗಿವೆ, ಕಾಡಿನ ಹುಲ್ಗಾವಲನ್ನು ಕಿಚ್ಚು ನುಂಗಿಬಿಟ್ಟಿದೆ.


ಎರಡು ಮೂರು ಊರಿನವರು ನೀರು ಕುಡಿಯುವದಕ್ಕೆ ಮತ್ತೊಂದು ಊರಿಗೆ ಬಳಲುತ್ತಾ ಹೋಗುತ್ತಿದ್ದರು; ಬಾಯಾರಿಕೆ ತೀರಲಿಲ್ಲ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು