Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:10 - ಕನ್ನಡ ಸತ್ಯವೇದವು J.V. (BSI)

10 ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:10
34 ತಿಳಿವುಗಳ ಹೋಲಿಕೆ  

(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಅವನು ತಿರಿಗಿ ಅವರಿಗೆ - ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಮಂದಿ ಇದ್ದಾರೆ.


ಸ್ವಗೌರವವನ್ನು ಕಾಪಾಡಿಕೊಳ್ಳುವವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡ ಬೀಳಬಾರದು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿನ ಯೆಹೋವವೇದಿಯನ್ನು ತಿರಿಗಿ ಕಟ್ಟಿಸಿದನು.


ಆ ಒಡಂಬಡಿಕೆ ಏನಂದರೆ, ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಸ್ಥಾಪಿಸಿ ಇಸ್ರಾಯೇಲ್ಯರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ ಎಂದು ಹೇಳಿದನು.


ಆಗ - ನಿನ್ನ ಆಲಯಾಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತದೆ ಎಂದು ಬರೆದ ಮಾತು ಶಿಷ್ಯರ ನೆನಪಿಗೆ ಬಂತು.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ ಅದು [ದೇವರ] ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ಮತಾಸಕ್ತಿಯು ನನ್ನನ್ನು ದಹಿಸಿಬಿಟ್ಟಿತು; ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದಾರಲ್ಲಾ.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು.


ಅದಕ್ಕೆ ಅವನು - ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು.


ಅಹಾಬನು ಇಸ್ರಾಯೇಲ್ಯರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರಿಸಿದನು.


ಅವನನ್ನು ಕಂಡ ಕೂಡಲೆ - ಇಸ್ರಾಯೇಲ್ಯರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ ಅಂದನು.


ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಅಟ್ಟಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವದಿಲ್ಲ. ಆ ಜನಾಂಗರಾಜ್ಯಗಳವರು ಎಲೀಯನು ನಮ್ಮಲ್ಲಿರುವದಿಲ್ಲವೆಂದು ಹೇಳಿದಾಗ ಅವನು ಅವರಿಂದ ಪ್ರಮಾಣಮಾಡಿಸಿದನು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಆಗ ಪ್ರವಾದಿಯು ತಿರಿಗಿ ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಅರಾಮ್ಯರ ಅರಸನು ಮುಂದಿನ ವರುಷದಲ್ಲಿ ಇನ್ನೊಮ್ಮೆ ನಿನಗೆ ವಿರೋಧವಾಗಿ ಬರುತ್ತಾನೆ; ಆದದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬದನ್ನು ಪರ್ಯಾಲೋಚಿಸು ಅಂದನು.


ಆಗ ಒಬ್ಬ ಪ್ರವಾದಿಯು ಇಸ್ರಾಯೇಲ್ಯರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ - ಈ ಮಹಾ ಸಮೂಹವನ್ನು ನೋಡಿದಿಯಾ; ನಾನು ಯೆಹೋವನೇ ಎಂಬದು ನಿನಗೆ ಗೊತ್ತಾಗುವಂತೆ ಈಹೊತ್ತೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಕೆಲವರನ್ನು ಗರಗಸದಿಂದ ಕೊಯ್ದು ಕೊಂದರು; ದೇವದ್ರೋಹಿಗಳಾಗಿ ಪ್ರಾಣವನ್ನು ಉಳಿಸಿಕೊಳ್ಳಿರೆಂದು ಕೆಲವರನ್ನು ಪ್ರೇರೇಪಿಸಿದರು; ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ತಿರುಗಾಡಿದರು.


ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡು ನನ್ನ ಜೊತೆಯಲ್ಲಿ ಬಂದು ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ಕೈ ಹಿಡಿದು ತನ್ನ ರಥದಲ್ಲಿ ಕರಕೊಂಡು ಹೋದನು.


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಕೊಳ್ಳಲಿಲ್ಲ.


ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ ನನಗೆ ಸದುತ್ತರವನ್ನು ದಯಪಾಲಿಸಿದಿ; ನಿನ್ನ ನಿಬಂಧನೆಗಳನ್ನು ನನಗೆ ಉಪದೇಶಿಸು.


ಯೆಹೋವನೇ, ನೀನು ಕಾರ್ಯನಡಿಸುವದಕ್ಕೆ ಸಮಯಬಂದದೆ; ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.


ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು