1 ಅರಸುಗಳು 19:14 - ಕನ್ನಡ ಸತ್ಯವೇದವು J.V. (BSI)14 ಅದಕ್ಕೆ ಅವನು - ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಅವನು, “ಸೇನಾಧೀಶ್ವರರಾದ ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.