Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:2 - ಕನ್ನಡ ಸತ್ಯವೇದವು J.V. (BSI)

2 ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:2
18 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು - ನಾನು ಈಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಎಂದು ಆಣೆಯಿಟ್ಟುಕೊಂಡನು.


ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದಾಗ ಅವನು ಅಹಾಬನಿಗೆ - ಸಮಾರ್ಯಪಟ್ಟಣದ ನಾಶನದಿಂದುಂಟಾಗುವ ಧೂಳು ಲೆಕ್ಕವಿಲ್ಲದ ನನ್ನ ಸೈನಿಕರ ಹಿಡಿತುಂಬವಷ್ಟಿದ್ದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದನು.


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂದಳು.


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.


ಅವನು ಮೋಶೆಗೆ - ನನ್ನ ಬಳಿಯಿಂದ ಹೋಗು; ಇನ್ನು ಮುಂದೆ ನನ್ನ ಮುಖದೆದುರಿಗೆ ಬರಲೇ ಕೂಡದು; ಎಚ್ಚರ; ತಿರಿಗಿ ಸನ್ನಿಧಿಗೆ ಬಂದರೆ ಮರಣದಂಡನೆ ಆಗುವದು ಎಂದು ಹೇಳಿದನು.


ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. (ಅವನು ಅಬ್ಷಾಲೋಮನ ಪಕ್ಷವನ್ನು ಹಿಡಿಯದಿದ್ದರೂ ಅದೋನೀಯನ ಪಕ್ಷವನ್ನು ಹಿಡಿದಿದ್ದನು.)


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು, ಅವರಲ್ಲಿ ನಮ್ಮ ಕೋರಿಕೆಯನ್ನು ತೀರಿಸಿಕೊಳ್ಳುವೆವು, ನಾವು ಕತ್ತಿಯನ್ನು ಹಿರಿದು ಭುಜಬಲದಿಂದ ಅವರನ್ನು ಸಂಹಾರ ಮಾಡುವೆವು ಎಂಬದಾಗಿ ನಮ್ಮ ಶತ್ರುಗಳು ಮಾತಾಡಿಕೊಳ್ಳುತ್ತಿದ್ದರು.


ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲಾ ಇಸ್ರಾಯೇಲ್ಯರಲ್ಲಿಯೂ ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ಅರಸನಾದ ಯೆಹೋಯಾಕೀಮನೂ ಅವನ ಎಲ್ಲಾ ಪ್ರಸಿದ್ಧ ಶೂರರೂ ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.


ಇದಲ್ಲದೆ ಅರಸನಾದ ಸೊಲೊಮೋನನು - ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು