1 ಅರಸುಗಳು 19:20 - ಕನ್ನಡ ಸತ್ಯವೇದವು J.V. (BSI)20 ಕೂಡಲೆ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ - ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವದಕ್ಕೆ ಅಪ್ಪಣೆಯಾಗಲಿ; ಅನಂತರ ನಿನ್ನನ್ನು ಹಿಂಬಾಲಿಸುವೆನು ಅಂದನು. ಅದಕ್ಕೆ ಎಲೀಯನು - ಹೋಗು; ನಾನು ನಿನಗೆ ಮಾಡಿದ್ದೇನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೂಡಲೆ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ; ಅನಂತರ ನಿನ್ನನ್ನು ಹಿಂಬಾಲಿಸುವೆನು,” ಎಂದನು. ಅದಕ್ಕೆ ಎಲೀಯನು, “ಹೋಗಿ ಬಾ; ನಾನು ನಿನಗೆ ಮಾಡಬೇಕಾದದ್ದನ್ನು ಮಾಡಿದ್ದೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಎಲೀಷನು ತಕ್ಷಣ ತನ್ನ ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಹೋದನು. ಎಲೀಷನು, “ನನ್ನ ತಾಯಿಗೆ ಮುದ್ದಿಟ್ಟು, ತಂದೆಗೆ ನಮಸ್ಕರಿಸಿ, ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು. ಎಲೀಯನು, “ಸರಿ, ನಾನು ನಿನ್ನನ್ನು ತಡೆಯುವುದಿಲ್ಲ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಅವನು ಎತ್ತುಗಳನ್ನು ಬಿಟ್ಟು, ಎಲೀಯನ ಹಿಂದೆ ಓಡಿಹೋಗಿ ಅವನಿಗೆ, “ಅಪ್ಪಣೆಯಾದರೆ, ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬಂದು ನಿನ್ನನ್ನು ಹಿಂಬಾಲಿಸುವೆನು,” ಎಂದನು. ಎಲೀಯನು, “ಹೋಗು, ನಾನು ನಿನಗೆ ಏನು ಮಾಡಿದೆ?” ಎಂದನು. ಅಧ್ಯಾಯವನ್ನು ನೋಡಿ |