Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:4 - ಕನ್ನಡ ಸತ್ಯವೇದವು J.V. (BSI)

4 ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು - ಯೆಹೋವನೇ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡು; ನಾನು ನನ್ನ ಪಿತೃಗಳಿಗಿಂತ ಉತ್ತಮನಲ್ಲ ಎಂದು ದೇವರನ್ನು ಪ್ರಾರ್ಥಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:4
19 ತಿಳಿವುಗಳ ಹೋಲಿಕೆ  

ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.


ನೀನು ಹೀಗೆ ಮಾಡುವದಕ್ಕಿಂತಲೂ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರ; ನನಗಾಗುವ ದುರವಸ್ಥೆಯನ್ನು ನಾನು ನೋಡಲಾರೆನು ಅಂದನು.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಉತ್ತಮಸ್ಥಾನದಲ್ಲಿದ್ದೇವೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಬಿದ್ದವರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ದಾರಿನಡೆದು ದಣಿದು ಆ ಬಾವಿಯ ಬಳಿಯಲ್ಲಿ ಹಾಗೆ ಕೂತುಕೊಂಡನು; ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.


ನೀನು ನೋ ಆಮೋನಿಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು, ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.


ಕಲ್ನೆಗೆ ಹೋಗಿ ನೋಡಿರಿ, ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ, ಆಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ; ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತವು ನಿಮ್ಮ ಪ್ರಾಂತಕ್ಕಿಂತ ದೊಡ್ಡದೋ?


ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.


ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.


ಏಲಾವೃಕ್ಷದ ಕೆಳಗೆ ಕೂತಿರುವ ಅವನನ್ನು ಕಂಡು - ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ ಎಂದು ಕೇಳಿದನು;


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?


ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಫಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ - ಎದ್ದು ಊಟಮಾಡು ಎಂದು ಹೇಳಿದನು.


ಆತನು ದಯಮಾಡಿ ತನ್ನ ಕೈ ಜಾಡಿಸಿ ನನ್ನನ್ನು ಜಜ್ಜಿ ಸಂಹರಿಸಿದರೆ


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವದಿಲ್ಲವೇ, ನಾನು ಬಯಸುವದನ್ನು ದೇವರು ಕೊಡುವದಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು