Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:10 - ಕನ್ನಡ ಸತ್ಯವೇದವು J.V. (BSI)

10 ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:10
23 ತಿಳಿವುಗಳ ಹೋಲಿಕೆ  

ಸಹೋದರರೇ, ಮೂಲ ಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತಾಡಬಹುದು ಏನಂದರೆ - ಅವನು ತೀರಿಹೋಗಿ ಹೂಣಲ್ಪಟ್ಟನು; ಅವನ ಸಮಾಧಿ ಈ ದಿನದವರೆಗೂ ನಮ್ಮಲ್ಲಿ ಅದೆ.


ದಾವೀದನಾದರೋ ತನ್ನ ಸಕಾಲದವರಿಗೆ ಸೇವೆಮಾಡಿದನಂತರ ದೈವಸಂಕಲ್ಪದಿಂದ ನಿದ್ದೆಹೋಗಿ ತನ್ನ ಪಿತೃಗಳ ಬಳಿಯಲ್ಲಿ ಇಡಲ್ಪಟ್ಟು ಕೊಳೆಯುವ ಅವಸ್ಥೆಯನ್ನು ಅನುಭವಿಸಿದನು.


ಅವನು ಐಶ್ವರ್ಯ ಮಾನ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.


ಪಿತೃಗಳ ಬಳಿಗೆ ಸೇರಿದನು; ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.


ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.


ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ ಯೆಹೋವನ ಆಲಯವನ್ನೂ ಯೆರೂಸಲೇವಿುನ ಸುತ್ತಣ ಗೋಡೆಯನ್ನೂ ಕಟ್ಟಿ ತೀರಿಸುವ ತನಕ ಆಕೆಯನ್ನು ದಾವೀದನ ನಗರದಲ್ಲಿ ಇರಿಸಿದನು.


ಆದರೂ ಅವನು ಈಗ ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.


ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ದಾವೀದನಗರವೆಂದು ಹೆಸರಾಯಿತು.


ದಾವೀದನು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನಿಗೆ - ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ನನಗೆ ಅಪ್ಪಣೆಕೊಡು ಅಂದನು.


ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.


ದಾವೀದನು ಆ ಕೋಟೆಗೆ ದಾವೀದನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ ಅದರ ಸುತ್ತಲೂ ವಿುಲ್ಲೋವಿನಿಂದ ಪ್ರಾರಂಭಿಸಿ ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಅನಂತರ ಅರಸನಾದ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನ ಪುರುಷರನ್ನು ಯೆರೂಸಲೇವಿುಗೆ ತನ್ನ ಹತ್ತಿರಕ್ಕೆ ಕರಿಸಿಕೊಂಡನು.


ರೆಹಬ್ಬಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.


ಅಬೀಯಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು.


ಅವನು ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಷಾಫಾಟನು ಅರಸನಾದನು.


ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳಿಕೆಯ ಹದಿನೇಳನೆಯ ವರುಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬವನು ಅರಸನಾಗಿ ಸಮಾರ್ಯದಲ್ಲಿ ಎರಡು ವರುಷ ಆಳಿದನು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯನು ಅರಸನಾದನು.


ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇವಿುನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಅವನ ಜನರು ಅವನ ಶವವನ್ನು ಕುದುರೆಗಳಿಂದ ಯೆರೂಸಲೇವಿುಗೆ ತಂದು ದಾವೀದನಗರದೊಳಗೆ ಅವನ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಯೋತಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬಶ್ಮಶಾನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಹಾಜನು ಅರಸನಾದನು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಶ್ಮಶಾನದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಹಿಜ್ಕೀಯ ಎಂಬವನು ಅರಸನಾದನು.


ಅವನು ಇಸ್ರಾಯೇಲ್ಯರ ವಿಷಯದಲ್ಲಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು