Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:15 - ಕನ್ನಡ ಸತ್ಯವೇದವು J.V. (BSI)

15 ಆಗ ಅವನು - ರಾಜ್ಯವು ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಾಯೇಲ್ಯರೆಲ್ಲರೂ ಎದುರು ನೋಡುತ್ತಿದ್ದರೆಂದು ನೀನು ಬಲ್ಲೆಯಷ್ಟೆ; ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಅವನು, “ರಾಜ್ಯ ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಯೇಲರೆಲ್ಲರು ಎದುರು ನೋಡುತ್ತಿದ್ದರೆಂಬುದು ನಿನಗೆ ತಿಳಿದ ವಿಷಯ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಸರ್ವೇಶ್ವರನಿಂದಲೇ ಅವನಿಗೆ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದೋನೀಯನು, “ಒಂದು ಕಾಲದಲ್ಲಿ ರಾಜ್ಯಾಧಿಕಾರವು ನನ್ನದಾಗಿತ್ತೆಂಬುದು ನಿನ್ನ ನೆನಪಿನಲ್ಲಿದೆ. ಇಸ್ರೇಲಿನ ಜನರೆಲ್ಲರೂ ನಾನೇ ಅವರ ರಾಜನೆಂದು ತಿಳಿದಿದ್ದರು. ಆದರೆ ಸಂಗತಿಗಳು ಬದಲಾದವು. ಈಗ ನನ್ನ ಸೋದರನೇ ರಾಜನು. ಯೆಹೋವನು ಅವನನ್ನು ರಾಜನನ್ನಾಗಿ ಆರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:15
19 ತಿಳಿವುಗಳ ಹೋಲಿಕೆ  

ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.


ಹಗ್ಗೀತಳ ಮಗನಾದ ಅದೋನೀಯನು ನಾನೇ ಅರಸನಾಗತಕ್ಕವನು ಎಂಬದಾಗಿ ಉಬ್ಬಿಕೊಂಡು ತನಗೋಸ್ಕರ ರಥರಥಾಶ್ವಗಳನ್ನೂ ಮುಂದೆ ಓಡುವದಕ್ಕಾಗಿ ಐವತ್ತು ಮಂದಿ ಸಿಪಾಯಿಗಳನ್ನೂ ಇಟ್ಟುಕೊಂಡನು.


ಆತನು ಅಗಾಧವಿಷಯಗಳನ್ನೂ ಗೂಡಾರ್ಥಗಳನ್ನೂ ಬೈಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವದೂ ಆತನಿಗೆ ಗೋಚರ; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.


ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.


ಅದಕ್ಕೆ ಹೂಷೈಯು - ಹಾಗಲ್ಲ, ಯೆಹೋವನೂ ಈ ಜನರೂ ಎಲ್ಲಾ ಇಸ್ರಾಯೇಲ್ಯರೂ ಯಾವನನ್ನು ಆರಿಸಿದ್ದಾರೋ ಅವನ ಪಕ್ಷದವನಾಗಿರುವೆನು; ಅವನ ಬಳಿಯಲ್ಲಿ ವಾಸಿಸುವೆನು.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ


ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲ್ಯರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.


ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆ ಮಗನನ್ನು ಹೆತ್ತಾಗ ಅವನಿಗೆ ಸೊಲಮೋನನೆಂದು ಹೆಸರಿಟ್ಟನು. ಯೆಹೋವನು ಹುಡುಗನನ್ನು ಪ್ರೀತಿಸಿದನು;


ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರನು.


ನಾಲ್ಕನೆಯವನು ಅದೋನೀಯನು; ಇವನು ಹಗ್ಗೀತಳ ಮಗನು. ಐದನೆಯವನು ಶೆಫಟ್ಯನು; ಇವನು ಅಬೀಟಲಳ ಮಗನು.


ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು.


ಆಮೇಲೆ ಅವನು - ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ ಅನ್ನಲು ಆಕೆಯು - ಹೇಳು ಅಂದಳು.


ಅದಿರಲಿ, ಒಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡ ಎನ್ನಲು ಆಕೆಯು - ಅದೇನು, ಹೇಳು ಅಂದಾಗ


ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ - ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ; ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ ಎಂದು ಉತ್ತರಕೊಟ್ಟನು.


ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿರುವ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದಿ ಎಲ್ಲಾ ಜನರು - ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು