1 ಅರಸುಗಳು 2:20 - ಕನ್ನಡ ಸತ್ಯವೇದವು J.V. (BSI)20 ಒಂದು ಸಣ್ಣ ಬಿನ್ನಹ ಉಂಟು, ಅದನ್ನು ತಿರಸ್ಕರಿಸಬೇಡ ಎಂದು ಹೇಳಿದಳು. ಅರಸನು - ನನ್ನ ತಾಯಿಯೇ, ಏನು ಬೇಕು, ಕೇಳು; ನಾನು ಆಗದು ಅನ್ನುವದಿಲ್ಲ ಎಂದನ್ನಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಆಕೆಯು, “ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ” ಎಂದು ಹೇಳಿದಳು. ಅರಸನು, “ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಒಂದು ಸಣ್ಣ ಬಿನ್ನಹವಿದೆ, ತಿರಸ್ಕರಿಸಬೇಡ,” ಎಂದು ಹೇಳಿದಳು. ಅರಸನು, “ತಾಯೇ, ಏನು ಬೇಕು, ಕೇಳಿ; ನಾನು ಆಗದು ಎನ್ನುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬತ್ಷೆಬೆಳು ಅವನಿಗೆ, “ನಿನ್ನಲ್ಲಿ ಒಂದು ಸಣ್ಣ ಕೋರಿಕೆಯಿದೆ, ಅದನ್ನು ದಯವಿಟ್ಟು ನಿರಾಕರಿಸದಿರು” ಎಂದು ಕೇಳಿದಳು. ರಾಜನು, “ನನ್ನ ತಾಯಿಯೇ, ನಿನ್ನ ಕೋರಿಕೆಯೇನು? ನಾನು ನಿನ್ನ ಕೋರಿಕೆಯನ್ನು ನಿರಾಕರಿಸುವುದಿಲ್ಲ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವಳು ಅವನಿಗೆ, “ನಿನ್ನಿಂದ ಒಂದು ಚಿಕ್ಕ ಬಿನ್ನಹವಿದೆ, ಆಗುವುದಿಲ್ಲವೆಂದು ಹೇಳಬೇಡ,” ಎಂದಳು. ಅರಸನು ಅವಳಿಗೆ, “ನನ್ನ ತಾಯಿಯೇ ಕೇಳು. ಏಕೆಂದರೆ ನಾನು ನಿನ್ನ ಮಾತಿಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |