Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:23 - ಕನ್ನಡ ಸತ್ಯವೇದವು J.V. (BSI)

23 ಇದಲ್ಲದೆ ಅರಸನಾದ ಸೊಲೊಮೋನನು - ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇದಲ್ಲದೆ, ಅರಸ ಸೊಲೊಮೋನನು, “ಸರ್ವೇಶ್ವರನಾಣೆ, ಅದೋನೀಯನ ಈ ಮಾತಿನ ನಿಮಿತ್ತ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದುದನ್ನು ಮಾಡಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಸೊಲೊಮೋನನು, “ಯೆಹೋವನಾಣೆ, ಅದೋನೀಯನು ಈ ರೀತಿ ನನ್ನನ್ನು ಕೇಳಿದ್ದಕ್ಕಾಗಿ ಅವನು ತನ್ನ ಜೀವವನ್ನೇ ಬೆಲೆಯಾಗಿ ತೆರಬೇಕಾಗುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ತರುವಾಯ ಅರಸನಾದ ಸೊಲೊಮೋನನು, “ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ, ನನಗೆ ದೇವರು ಹಾಗೆಯೂ, ಅದಕ್ಕಿಂತಲೂ ಅಧಿಕವಾಗಿಯೂ ಮಾಡಲಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:23
14 ತಿಳಿವುಗಳ ಹೋಲಿಕೆ  

ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂದಳು.


ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೇ ಬರಲಿ;


ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಎಡವಿ ಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.


ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?


ಜ್ಞಾನಿಯ ಮಾತು ಹಿತ; ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವದು.


ಇದಲ್ಲದೆ ಅವನು - ನಾನು ಈಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಎಂದು ಆಣೆಯಿಟ್ಟುಕೊಂಡನು.


ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದಾಗ ಅವನು ಅಹಾಬನಿಗೆ - ಸಮಾರ್ಯಪಟ್ಟಣದ ನಾಶನದಿಂದುಂಟಾಗುವ ಧೂಳು ಲೆಕ್ಕವಿಲ್ಲದ ನನ್ನ ಸೈನಿಕರ ಹಿಡಿತುಂಬವಷ್ಟಿದ್ದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದನು.


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು - ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ ಎಂದು ಆಣೆಯಿಟ್ಟು ಹೇಳಿದನು.


ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲಾ ಇಸ್ರಾಯೇಲ್ಯರಲ್ಲಿಯೂ ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ


ಅದಕ್ಕೆ ಸೌಲನು - ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಅನ್ನಲು ಜನರು ಅವನಿಗೆ -


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು