1 ಅರಸುಗಳು 2:30 - ಕನ್ನಡ ಸತ್ಯವೇದವು J.V. (BSI)30 ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ - ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ ಎಂದು ಹೇಳಲು ಅವನು - ಬರುವದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ ಎಂದು ಉತ್ತರ ಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಅಂದದ್ದನ್ನು ತಿಳಿಸಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ” ಎಂದು ಹೇಳಲು ಅವನು “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಬೆನಾಯನು ಸರ್ವೇಶ್ವರನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸರು ಆಜ್ಞಾಪಿಸುತ್ತಾರೆ,” ಎಂದನು. ಆದರೆ ಅವನು, “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ,” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಬೆನಾಯನು ಯೆಹೋವನ ಗುಡಾರದೊಳಕ್ಕೆ ಹೋಗಿ ಯೋವಾಬನಿಗೆ, “ರಾಜನ ಆಜ್ಞೆಯಂತೆ ‘ಹೊರಗೆ ಬಾ!’” ಎಂದು ಹೇಳಿದನು. ಆದರೆ ಯೋವಾಬನು, “ಇಲ್ಲ, ನಾನಿಲ್ಲೇ ಸಾಯುತ್ತೇನೆ” ಎಂದನು. ಆದ್ದರಿಂದ ಬೆನಾಯನು ರಾಜನ ಬಳಿಗೆ ಹಿಂದಿರುಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಬೆನಾಯನು ಯೆಹೋವ ದೇವರ ಗುಡಾರಕ್ಕೆ ಬಂದು ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ,” ಎಂದನು. ಅದಕ್ಕವನು, “ಇಲ್ಲ, ಇಲ್ಲಿಯೇ ಸಾಯುತ್ತೇನೆ,” ಎಂದನು. ಬೆನಾಯನು ಅರಸನ ಬಳಿಗೆ ತಿರುಗಿ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು. ಅಧ್ಯಾಯವನ್ನು ನೋಡಿ |