Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:42 - ಕನ್ನಡ ಸತ್ಯವೇದವು J.V. (BSI)

42 ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣತೆಗೆದುಕೊಂಡೆನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, ‘ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ’ ಎಂದು ಹೇಳಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ನೀನು ಈ ಊರನ್ನು ಬಿಟ್ಟು ಎಲ್ಲಿಗಾದರು ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ಖಂಡಿತವಾಗಿ ಹೇಳಿ ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡನಲ್ಲವೆ? ಆಗ ನೀನು, ‘ಒಳ್ಳೆಯದು, ಹಾಗೆಯೇ ಮಾಡುತ್ತೇನೆ,’ ಎಂದು ಹೇಳಿದೆಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಸೊಲೊಮೋನನು ಶಿಮ್ಮಿಯನ್ನು ಕರೆಯಿಸಿ, “ನೀನು ಜೆರುಸಲೇಮನ್ನು ಬಿಟ್ಟುಹೋದರೆ ಮರಣಶಿಕ್ಷೆಯಾಗುವುದೆಂದು ನಾನು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದೆನು. ನೀನು ಬೇರೆಲ್ಲಾದರೂ ಹೋದರೆ ಅದು ನಿನ್ನ ಸ್ವಂತ ತಪ್ಪಾಗುವುದೆಂದೂ ನಿನ್ನನ್ನು ಕೊಲ್ಲಲಾಗುವುದೆಂದೂ ನಾನು ನಿನ್ನನ್ನು ಎಚ್ಚರಿಸಿದ್ದೆನು. ಅದಕ್ಕೆ ನೀನೂ ಒಪ್ಪಿಗೆ ನೀಡಿ ನನಗೆ ವಿಧೇಯನಾಗಿರುವುದಾಗಿ ತಿಳಿಸಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:42
6 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?


ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ;


ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ಶಿಮ್ಮಿಯು ಯೆರೂಸಲೇವಿುನಿಂದ ಗತ್ ಊರಿಗೆ ಹೋಗಿ ಬಂದದ್ದು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರಿಸಿ ಅವನಿಗೆ -


ಆಗ ನೀನು - ಒಳ್ಳೇದು, ಹಾಗೆಯೇ ಮಾಡುತ್ತೇನೆ ಎಂದು ಹೇಳಿದಿಯಲ್ಲಾ. ಹಾಗಾದರೆ ಯೆಹೋವನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ಯಾಕೆ ಕೈಕೊಳ್ಳಲಿಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು