Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:11 - ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರ ಅರಸನು ಬಂದ ದೂತರಿಗೆ - ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರಾಜನಾದ ಅಹಾಬನು, “ಯುದ್ಧಕ್ಕೆ ಹೋಗುವ ಸೈನಿಕನು ತನ್ನ ಆಯುಧಗಳನ್ನು ಧರಿಸಿಕೊಳ್ಳುವಾಗ ಹೆಚ್ಚಳಪಡದೆ, ಯುದ್ಧವಾದ ಮೇಲೆ ತನ್ನ ಆಯುಧಗಳನ್ನು ಬಿಚ್ಚಿಡುವಾಗ ಹೆಚ್ಚಳಪಡುತ್ತಾನೆಂಬುದನ್ನು ಬೆನ್ಹದದನಿಗೆ ಹೇಳಿ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, “ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:11
12 ತಿಳಿವುಗಳ ಹೋಲಿಕೆ  

ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಕೂಡಲೆ ಕೋಳಿ ಕೂಗಿತು. ಆಗ ಪೇತ್ರನು - ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ಹೇಳಿದ ಮಾತನ್ನು ನೆನಸಿ ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಯುಕ್ತಸಮಯವನ್ನು ಉಪೇಕ್ಷಿಸಿದವನು ಎಂದು ಅಲ್ಲಿ ಕೂಗಿದರು.


ಅರಸುಗಳು ತಮಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಶಕ್ತರಾದ ಎಲ್ಲಾ ಯೌವನಸ್ಥರನ್ನೂ ಪ್ರಾಯಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಮೇರೆಗೆ ಬಂದು ಬೆಳಿಗ್ಗೆ ಎದ್ದು ನೋಡಲು


ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು