Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:16 - ಕನ್ನಡ ಸತ್ಯವೇದವು J.V. (BSI)

16 ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ಅರಸರ ಸಂಗಡ ಮದ್ಯಪಾನಮಾಡಿ ಮತ್ತನಾಗಿ ಡೇರೆಯಲ್ಲಿ ಕೂತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮಧ್ಯಾಹ್ನದಲ್ಲಿ, ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ರಾಜರ ಸಂಗಡ ಮದ್ಯಪಾನಮಾಡಿ ಮತ್ತನಾಗಿ, ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮಧ್ಯಾಹ್ನದ ವೇಳೆಗೆ, ರಾಜನಾದ ಬೆನ್ಹದದನು ಮತ್ತು ಅವನ ಸಹಾಯಕ್ಕಾಗಿ ಬಂದಿದ್ದ ಮೂವತ್ತೆರಡು ಮಂದಿ ರಾಜರು, ಅವರ ಗುಡಾರಗಳಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದರು. ಆ ಸಮಯದಲ್ಲಿ ರಾಜನಾದ ಅಹಾಬನ ಆಕ್ರಮಣವು ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಮಧ್ಯಾಹ್ನದಲ್ಲಿ ಹೊರಟರು. ಆದರೆ ಬೆನ್ಹದದನೂ, ಅವರ ಸಹಾಯಕರಾದ ಮೂವತ್ತೆರಡು ಮಂದಿ ಅರಸರೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:16
13 ತಿಳಿವುಗಳ ಹೋಲಿಕೆ  

ವ್ಯಭಿಚಾರದ್ರಾಕ್ಷಾರಸಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.


ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿವಿುತ್ತ ಕೆಡವಲ್ಪಡುವರು.


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರೋಧವಾಗಿ ಒಳಸಂಚುಮಾಡಿದನು. ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನನ್ನು ರೇಗಿಸಿ ಆತನ ದೃಷ್ಟಿಯಲ್ಲಿ ದ್ರೋಹಿಯಾದದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದದರಿಂದಲೂ ಯೆಹೋವನು ಹನಾನೀಯ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೂ ಅವನ ಕುಟುಂಬಕ್ಕೂ ದುರ್ಗತಿಯನ್ನು ಮುಂತಿಳಿಸಿದನು.


ಅಹಾಬನು ಪ್ರದೇಶಾಧಿಪತಿಗಳ ಆಳುಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಮಂದಿಯಿದ್ದರು; ಇಸ್ರಾಯೇಲ್ಯರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಮಂದಿಯಿದ್ದರು.


ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಲು ಅವನು ಅವರಿಗೆ -


ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.


ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ; ಇವುಗಳಿಂದ ಓಲಾಡುವವನು ಜ್ಞಾನಿಯಲ್ಲ.


ಹೀಗಿರಲು ಸೆರೆಗೆ ಒಯ್ಯಲ್ಪಡುವವರ ಮುಂದುಗಡೆ ಅವರು ಸೆರೆಗೆ ಹೋಗುವರು; ಒರಗಿಕೊಳ್ಳುವವರ ಹರ್ಷಧ್ವನಿಯು ನಿಂತುಹೋಗುವದು.


ಅಯ್ಯೋ, ಸುರಾಪಾನದಲ್ಲಿ ಶೂರರೂ ಮದ್ಯವಿುಶ್ರಣದಲ್ಲಿ ಸಾಹಸಿಗಳೂ ಆಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು