1 ಅರಸುಗಳು 20:23 - ಕನ್ನಡ ಸತ್ಯವೇದವು J.V. (BSI)23 ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ - ಇಸ್ರಾಯೇಲ್ಯರ ದೇವರು ಬೆಟ್ಟಗಳ ದೇವರಾಗಿರುವದರಿಂದ ಅವರು ನಮ್ಮನ್ನು ಸೊಲಿಸಿದರು; ನಾವು ಅವರೊಡನೆ ಬೈಲಿನಲ್ಲಿ ಯುದ್ಧಮಾಡುವದಾದರೆ ಹೇಗೂ ಜಯಹೊಂದುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸಿರಿಯಾದವರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಯೇಲರ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು; ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಖಂಡಿತವಾಗಿ ಜಯಹೊಂದುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಅರಾಮಿನ ಅರಸನ ಸೇವಕರು ಅವನಿಗೆ, “ಅವರ ದೇವರುಗಳು, ಪರ್ವತಗಳ ದೇವರುಗಳು, ಆದ್ದರಿಂದ ಅವರು ನಮ್ಮನ್ನು ಜಯಿಸಿದರು. ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧಮಾಡಿದರೆ, ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗಿರುವೆವು. ಅಧ್ಯಾಯವನ್ನು ನೋಡಿ |