Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:26 - ಕನ್ನಡ ಸತ್ಯವೇದವು J.V. (BSI)

26 ಒಂದು ವರುಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಅಫೇಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಒಂದು ವರ್ಷ ದಾಟಿದನಂತರ ಬೆನ್ಹದದನು ಸಿರಿಯಾದವರನ್ನು ಕೂಡಿಸಿಕೊಂಡು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಅಫೇಕಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ವಸಂತಮಾಸದಲ್ಲಿ ಬೆನ್ಹದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅಫೇಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ವಸಂತ ಕಾಲದಲ್ಲಿ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ, ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಅಫೇಕಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:26
10 ತಿಳಿವುಗಳ ಹೋಲಿಕೆ  

ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ ಎಂದನು. ಅವನು ತೆರೆದನು. ಅನಂತರ - ಬಾಣವನ್ನೆಸೆ ಎಂದು ಆಜ್ಞಾಪಿಸಿದನು. ಅವನು ಎಸೆಯಲು - ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ ಎಂದು ಹೇಳಿದನು.


ಆಗ ಪ್ರವಾದಿಯು ತಿರಿಗಿ ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಅರಾಮ್ಯರ ಅರಸನು ಮುಂದಿನ ವರುಷದಲ್ಲಿ ಇನ್ನೊಮ್ಮೆ ನಿನಗೆ ವಿರೋಧವಾಗಿ ಬರುತ್ತಾನೆ; ಆದದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬದನ್ನು ಪರ್ಯಾಲೋಚಿಸು ಅಂದನು.


ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು; ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲ್ಯರು ಇಜ್ರೇಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು.


ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು. ಇಸ್ರಾಯೇಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳುಕೊಂಡರು.


ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿಲ್ಲ;


ಉಮ್ಮಾ, ಅಫೇಕ್, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳೂ


ಗೆಷೂರ್ಯರ ಸೀಮೆಯು, ದಕ್ಷಿಣದಲ್ಲಿದ್ದ ಅವ್ವೀಯರ ದೇಶವು ಇವುಗಳೂ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು,


ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆಹಾಕಿದರು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು.


ಅನಂತರ ನಮ್ಮ ಸೈನ್ಯದಿಂದ ನಷ್ಟವಾಗಿ ಹೋದಷ್ಟು ಜನರನ್ನೂ ಕುದುರೆಗಳನ್ನೂ ರಥಗಳನ್ನೂ ತಿರಿಗಿ ಕೂಡಿಸಿ ಅವರೊಡನೆ ಬೈಲಿನಲ್ಲಿ ಯುದ್ಧಮಾಡೋಣ; ನಮಗೆ ಹೇಗೂ ಜಯಸಿಕ್ಕುವದು ಎಂದು ಹೇಳಿದರು. ಅವನು ಅದರಂತೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು