Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:27 - ಕನ್ನಡ ಸತ್ಯವೇದವು J.V. (BSI)

27 ಇಸ್ರಾಯೇಲ್ಯರೂ ಕೂಡಿ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರೋಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲ್ಯರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಸ್ರಾಯೇಲರು ಸಹ ಆಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇಸ್ರಯೇಲರು ಸಹ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರುದ್ಧ ಕೂಡಿಬಂದರು. ಸಿರಿಯಾದವರು ನಾಡಿನಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿದ್ದ ಇಸ್ರಯೇಲರು ಅವರ ಎದುರಿನಲ್ಲೇ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಸ್ರೇಲರೂ ಯುದ್ಧಕ್ಕೆ ಸಿದ್ಧರಾದರು. ಇಸ್ರೇಲಿನ ಜನರು ಅರಾಮ್ಯದ ಸೇನೆಯೊಡನೆ ಹೋರಾಡಲು ಹೋದರು. ಅವರು ಅರಾಮ್ಯದ ಪಾಳೆಯಕ್ಕೆ ಎದುರಾಗಿ ತಮ್ಮ ಪಾಳೆಯ ಮಾಡಿಕೊಂಡರು. ಶತ್ರುಗಳಿಗೆ ಹೋಲಿಸಿದರೆ ಇಸ್ರೇಲರು ಆಡುಗಳ ಎರಡು ಚಿಕ್ಕಮಂದೆಯಂತೆ ಕಾಣುತ್ತಿದ್ದರು. ಆದರೆ ಅರಾಮ್ಯದ ಸೈನಿಕರು ಎಲ್ಲಾ ಪ್ರದೇಶವನ್ನು ವ್ಯಾಪಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ಇಸ್ರಾಯೇಲರು ಲೆಕ್ಕ ಮಾಡಿ ಆಹಾರವನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲರು ಅವರಿಗೆದುರಾಗಿ ದಂಡಿಳಿದಿರುವಾಗ, ಅವರು ಆಡುಮರಿಗಳ ಎರಡು ಮಂದೆಗಳ ಹಾಗಿದ್ದರು. ಆದರೆ ಅರಾಮ್ಯರು ಮೈದಾನದಲ್ಲಿ ಸಂಪೂರ್ಣವಾಗಿ ಆವರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:27
11 ತಿಳಿವುಗಳ ಹೋಲಿಕೆ  

ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ವಿುಡಿತೆಗಳಂತೆ ಗುಂಪುಗುಂಪಾಗಿ ಬಂದರು; ಅವರೂ ಅವರ ಒಂಟೆಗಳೂ ಅಸಂಖ್ಯ. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಸೌಲನಾದರೋ ಗಿಬೆಯ ಪ್ರಾಂತದ ಅಂತ್ಯಭಾಗವಾಗಿರುವ ವಿುಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರೂ


ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ವಿುದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳುಕೊಂಡಿತ್ತು.


ನೀವು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ - ನೀವು ಇನ್ನು ಮೂರು ದಿವಸಗಳಲ್ಲಿ ಈ ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶವನ್ನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗಬೇಕು. ಆದದರಿಂದ ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ ಎಂದು ಹೇಳಬೇಕು ಅಂದನು.


ಅವರ ಶರಣನು ಅವರನ್ನು ಶತ್ರುಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಮಂದಿ ಸೋತುಹೋಗುತ್ತಿದ್ದರೋ? ಯೆಹೋವನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತುಸಾವಿರ ಮಂದಿ ಓಡಿಹೋಗುತ್ತಿದ್ದರೋ?


ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು


ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ವಿುಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಆದದರಿಂದ ಅರಸನಾದ ಯೋರಾಮನು ಒಡನೆ ಇಸ್ರಾಯೇಲ್ಯರನ್ನು ಕೂಡಿಸಿಕೊಂಡು ಸಮಾರ್ಯದಿಂದ ಹೊರಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು