1 ಅರಸುಗಳು 20:28 - ಕನ್ನಡ ಸತ್ಯವೇದವು J.V. (BSI)28 ಆಗ ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಯೆಹೋವನು ಹೀಗನ್ನುತ್ತಾನೆ - ಯೆಹೋವನು ತಗ್ಗುಗಳ ದೇವರಲ್ಲ, ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿ |