1 ಅರಸುಗಳು 20:32 - ಕನ್ನಡ ಸತ್ಯವೇದವು J.V. (BSI)32 ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ನನಗೆ ಜೀವದಾನಮಾಡಬೇಕೆಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ ಅಂದರು. ಆಗ ಅವನು - ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ” ಅಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಇಸ್ರಯೇಲರ ಅರಸನ ಬಳಿಗೆ ಬಂದು, “ಜೀವದಾನ ಮಾಡಬೇಕೆಂದು ನಿಮ್ಮ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ,” ಎಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡು, ತಲೆಯ ಮೇಲೆ ಹಗ್ಗವನ್ನು ಹಾಕಿಕೊಂಡು, ಇಸ್ರೇಲಿನ ರಾಜನ ಬಳಿಗೆ ಬಂದರು. ಅವರು, “ನಿಮ್ಮ ಸೇವಕನಾದ ಬೆನ್ಹದದನು ಹೀಗೆನ್ನುವನು: ‘ದಯವಿಟ್ಟು ನನ್ನನ್ನು ಜೀವಸಹಿತ ಬಿಡು’” ಎಂದರು. ಅಹಾಬನು, “ಅವನಿನ್ನೂ ಜೀವಸಹಿತ ಇದ್ದಾನೆಯೇ? ಅವನು ನನ್ನ ಸೋದರ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಹಾಗೆಯೇ ಅವರು ಗೋಣಿಯನ್ನು ತಮ್ಮ ನಡುವುಗಳಿಗೆ ಕಟ್ಟಿಕೊಂಡು, ಹಗ್ಗಗಳನ್ನು ತಮ್ಮ ತಲೆಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು, “ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ,” ಎಂದರು. ಅದಕ್ಕೆ ಅರಸನು, “ಅವನು ಇನ್ನೂ ಬದುಕಿದ್ದಾನೋ? ಅವನು ನನ್ನ ಸಹೋದರನು,” ಎಂದನು. ಅಧ್ಯಾಯವನ್ನು ನೋಡಿ |