Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:34 - ಕನ್ನಡ ಸತ್ಯವೇದವು J.V. (BSI)

34 ಬೆನ್ಹದದನು ಅವನಿಗೆ - ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರ್ಯದಲ್ಲಿ ಮಾಡಿದಂತೆ ನೀನೂ ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ಮಾಡಿಸಿಕೊಳ್ಳಬಹುದು ಎಂದು ಹೇಳಲು ಅಹಾಬನು - ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿ ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಬೆನ್ಹದದನು ಅವನಿಗೆ, “ನನ್ನ ತಂದೆ, ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರಿಯಾದಲ್ಲಿ ಮಾಡಿದಂತೆ ನೀನೂ ನನಗಾಗಿ ದಮಸ್ಕದಲ್ಲಿ ಕೆಲವು ವ್ಯಾಪಾರ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳಬಹುದು,” ಎಂದು ಹೇಳಿದನು. ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ,” ಎಂದು ಹೇಳಿ, ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣಗಳನ್ನು ತಿರುಗಿಕೊಡುತ್ತೇನೆ. ನನ್ನ ತಂದೆ ಸಮಾರ್ಯದಲ್ಲಿ ಮಾಡಿದ ಹಾಗೆಯೇ, ದಮಸ್ಕದಲ್ಲಿ ನೀನು ನಿನಗಾಗಿ ಬೀದಿಗಳನ್ನು ಮಾಡಿಸಬೇಕು,” ಎಂದನು. ಅದಕ್ಕೆ ಅಹಾಬನು, “ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳುಹಿಸಿಬಿಡುತ್ತೇನೆ,” ಎಂದನು. ಹೀಗೆಯೇ ಅಹಾಬನು ಬೆನ್ಹದದನ ಸಂಗಡ ಒಡಂಬಡಿಕೆಯನ್ನು ಮಾಡಿ, ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:34
12 ತಿಳಿವುಗಳ ಹೋಲಿಕೆ  

ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲ್ಯರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್‍ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ ಇವುಗಳನ್ನು ಹಾಳುಮಾಡಿದರು.


ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.


ಪ್ರವಾದಿಯು ಅರಸನಿಗೆ - ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಇವರು ಯಾವದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.


ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರೋಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.


ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.


ಅಮ್ಮೋನಿಯನಾದ ನಾಹಾಷನು ಹೊರಟುಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆಹಾಕಲು ಯಾಬೇಷಿನವರು ಅವನನ್ನು - ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನ ಸೇವಕರಾಗಿರುವೆವು ಎಂದು ಬೇಡಿಕೊಂಡರು.


ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು - ಬೆನ್ಹದದನು ನಿನ್ನ ಸಹೋದರನೇ ಹೌದು ಅಂದರು. ಅವನು ಅವರಿಗೆ - ಹೋಗಿ ಬೆನ್ಹದದನನ್ನು ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ಅವರ ಅರಸನಾದ ಅಗಾಗನನ್ನು ಸಜೀವಿಯಾಗಿ ಹಿಡಿದು ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.


ಸೌಲನೂ ಇಸ್ರಾಯೇಲ್ಯರೂ ಅಗಾಗನನ್ನೂ ಮೇಲ್ತರದ ಕುರಿ ದನಗಳನ್ನೂ ಕುರಿಮರಿಗಳನ್ನೂ ಕೊಬ್ಬಿದ ಪಶುಗಳನ್ನೂ ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡ ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು