1 ಅರಸುಗಳು 20:39 - ಕನ್ನಡ ಸತ್ಯವೇದವು J.V. (BSI)39 ಅವನು ಹಾದುಹೋಗುವಾಗ ಅವನಿಗೆ - ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬನು ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು - ನೀನು ಇವನನ್ನು ಕಾಯಬೇಕು; ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವದು; ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವನು ಹಾದು ಹೋಗುವಾಗ ಅವನಿಗೆ, “ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅರಸನು ಹಾದುಹೋಗುವಾಗ ಅವನಿಗೆ, “ನಿಮ್ಮ ಸೇವಕನಾದ ನಾನು ಯುದ್ಧಕ್ಕೆ ಹೋಗಿದ್ದಾಗ ರಣರಂಗದಲ್ಲಿ ಒಬ್ಬನು, ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ನಿನ್ನ ಪ್ರಾಣವು ನನ್ನದಾಗಿರುವುದು; ಇಲ್ಲವೆ ನೀನು ನನಗೆ ಮೂರು ಸಾವಿರ ಬೆಳ್ಳಿನಾಣ್ಯವನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ರಾಜನು ಅಲ್ಲಿಗೆ ಬಂದಾಗ, ಪ್ರವಾದಿಯು ಅವನಿಗೆ, “ನಾನು ಯುದ್ಧದಲ್ಲಿ ಹೋರಾಡುವುದಕ್ಕೆ ಹೋಗಿದ್ದೆನು. ನಿನ್ನವನಾದ ಒಬ್ಬ ಮನುಷ್ಯನು ಶತ್ರುವಿನ ಸೈನಿಕನೊಬ್ಬನನ್ನು ನನ್ನ ಬಳಿಗೆ ಕರೆದುಕೊಂಡು ಬಂದು, ‘ಈ ಮನುಷ್ಯನನ್ನು ರಕ್ಷಿಸು. ಇವನು ಓಡಿಹೋದರೆ, ಇವನ ಜೀವಕ್ಕೆ ಬದಲಾಗಿ ನಿನ್ನ ಜೀವವನ್ನು ಕೊಡಬೇಕಾಗುವುದು ಅಥವಾ ಬೆಳ್ಳಿಯ ಮೂವತ್ನಾಲ್ಕು ಕಿಲೋಗ್ರಾಂ ದಂಡ ಕೊಡಬೇಕಾಗುವುದು’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅರಸನು ಹಾದು ಹೋಗುತ್ತಿರುವಾಗ, ಪ್ರವಾದಿಯು ಅರಸನಿಗೆ ಕೂಗಿ ಹೇಳಿದ್ದೇನೆಂದರೆ, “ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ಸೆರೆಯವನನ್ನು ನನ್ನ ಬಳಿಗೆ ಹಿಡಿದುಕೊಂಡು ಬಂದು, ‘ಈ ಮನುಷ್ಯನನ್ನು ಕಾಯಿ. ಇವನು ತಪ್ಪಿಸಿಕೊಂಡುಹೋದರೆ ನಿನ್ನ ಪ್ರಾಣವು ಇವನ ಪ್ರಾಣಕ್ಕೆ ಬದಲಾಗಿರುವುದು. ಇಲ್ಲವೆ ನೀನು ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಡಬೇಕು,’ ಎಂದನು. ಅಧ್ಯಾಯವನ್ನು ನೋಡಿ |