Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:4 - ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ಇಸ್ರಾಯೇಲ್ಯರ ಅರಸನು - ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ; ನನಗಿರುವದೆಲ್ಲವೂ ನಿನ್ನದೇ ಎಂದು ಉತ್ತರಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ಇಸ್ರಾಯೇಲರ ಅರಸನು, “ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ, ನನಗಿರುವುದೆಲ್ಲವೂ ನಿನ್ನದೇ” ಎಂದು ಉತ್ತರಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಇಸ್ರಯೇಲರ ಆ ಅರಸನು, “ನನ್ನ ಒಡೆಯನಾದ ಅರಸರೇ, ನೀವು ಹೇಳಿದಂತೆ ನಾನು ನಿಮ್ಮವನೇ; ನನಗಿರುವುದೆಲ್ಲವೂ ನಿಮ್ಮದೇ,” ಎಂದು ಉತ್ತರಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲಿನ ರಾಜನು, “ನನ್ನ ಒಡೆಯನಾದ ರಾಜನೇ, ಈಗ ನಾನು ನಿನ್ನವನೇ. ನನ್ನ ಬಳಿ ಇರುವುದೆಲ್ಲವೂ ನಿನ್ನದೇ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲಿನ ಅರಸನು ಉತ್ತರವಾಗಿ, “ಅರಸನಾದ ನನ್ನ ಒಡೆಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು, ನನಗುಂಟಾದ ಸಮಸ್ತವೂ ನಿನ್ನದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:4
10 ತಿಳಿವುಗಳ ಹೋಲಿಕೆ  

ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;


ನಿನ್ನ ಬೆಳ್ಳಿಬಂಗಾರವು ನನ್ನದು; ನಿನ್ನ ಪ್ರಿಯ ಸತಿಸುತರೂ ನನ್ನವರೇ ಎಂದು ತಿಳಿದುಕೋ ಎಂಬದಾಗಿ ಹೇಳಿಸಿದನು.


ಆ ದೂತರು ತಿರಿಗಿ ಅಹಾಬನ ಬಳಿಗೆ ಬಂದು ಅವನಿಗೆ - ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲಾ.


ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲಾ ಕೂಡಿ ಯೇಹುವಿಗೆ - ನಾವು ನಿನ್ನ ಆಜ್ಞಾಧಾರಕರಾದ ಸೇವಕರು; ನಾವಾಗಿ ನಮಗೊಬ್ಬ ಅರಸನನ್ನು ನೇವಿುಸಿಕೊಳ್ಳುವದಿಲ್ಲ; ನಿನ್ನ ಚಿತ್ತವೇ ನೆರವೇರಲಿ ಎಂದು ಹೇಳಿಕಳುಹಿಸಿದರು.


ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ - ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿಕಾಣುವ ಪ್ರಕಾರ ಮಾಡಿರಿ ಎಂದು ಹೇಳಿದರು.


ಅದಕ್ಕೆ ಶಿಮ್ಮಿಯು - ಒಳ್ಳೇದು; ನನ್ನ ಒಡೆಯನೂ ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು ಎಂದು ಉತ್ತರಕೊಟ್ಟು ಬಹುದಿನಗಳವರೆಗೂ ಯೆರೂಸಲೇವಿುನಲ್ಲೆ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು