Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:40 - ಕನ್ನಡ ಸತ್ಯವೇದವು J.V. (BSI)

40 ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು ಎಂದು ಮೊರೆಯಿಟ್ಟನು. ಇಸ್ರಾಯೇಲ್ಯರ ಅರಸನು ಇವನಿಗೆ - ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೋ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು” ಎಂದು ಮೊರೆಯಿಟ್ಟನು. ಇಸ್ರಾಯೇಲರ ಅರಸನು ಇವನಿಗೆ “ನಿನಗೆ ಆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನಾನು ಬೇರೆ ಕೆಲಸದಲ್ಲಿದ್ದಾಗ ಆ ವ್ಯಕ್ತಿ ತಪ್ಪಿಸಿಕೊಂಡು ಹೋದನು,” ಎಂದು ಮೊರೆಯಿಟ್ಟನು. ಇಸ್ರಯೇಲರ ಅರಸನು ಇವನಿಗೆ, “ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೇ?’ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ನಾನು ಇತರ ಕೆಲಸಗಳಲ್ಲಿ ನಿರತನಾಗಿದ್ದಾಗ, ಆ ಮನುಷ್ಯನು ಓಡಿಹೋದನು” ಎಂದು ಹೇಳಿದನು. ಇಸ್ರೇಲಿನ ರಾಜನು, “ಆ ಸೈನಿಕನು ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟ ನೀನು ನಿನ್ನನ್ನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವೆ. ಆದ್ದರಿಂದ, ಅದರ ಪರಿಹಾರವೂ ನಿನಗೆ ತಿಳಿದಿದೆ. ಆ ಮನುಷ್ಯನೇನು ಹೇಳಿದನೊ ಅದನ್ನು ನೀನು ಮಾಡಲೇಬೇಕು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ನಿನ್ನ ಸೇವಕನು ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ತಪ್ಪಿಸಿಕೊಂಡುಹೋದನು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ನಿನ್ನ ತೀರ್ಪಿನ ಹಾಗೆಯೇ ಆಗಲಿ, ನೀನು ಸರಿಯಾಗಿ ನಿರ್ಣಯಿಸಿದಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:40
10 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?


ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಬಾಯೇ, ನಿನ್ನ ತುಟಿಗಳು ಕೂಡಾ ನಿನಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ.


ಆಕೆಯು - ಅರಸನು ಈ ತೀರ್ಪುಕೊಟ್ಟದ್ದರಿಂದ ತನ್ನನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟವನನ್ನು ಸೇರಿಸಿಕೊಳ್ಳಲೊಲ್ಲದೆ ಹೋಗುವದರಿಂದ ದೇವಪ್ರಜೆಗೆ ವಿರೋಧವಾಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?


ಅವನು ಹಾದುಹೋಗುವಾಗ ಅವನಿಗೆ - ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬನು ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು - ನೀನು ಇವನನ್ನು ಕಾಯಬೇಕು; ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವದು; ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಎಂದು ಆಜ್ಞಾಪಿಸಿದನು.


ಕೂಡಲೇ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲ್ಯರ ಅರಸನಿಗೆ ಗೊತ್ತಾಯಿತು.


ಯೆಹೋವನು ನೇವಿುಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪತಗಲಲಿ.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು