Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:9 - ಕನ್ನಡ ಸತ್ಯವೇದವು J.V. (BSI)

9 ಆದದರಿಂದ ಅವನು ಬಂದಂಥ ದೂತರ ಮುಖಾಂತರವಾಗಿ ಬೆನ್ಹದದನಿಗೆ - ನನ್ನ ಒಡೆಯನೇ, ಅರಸನೇ, ನಾನು ನಿನ್ನ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ; ಆದರೆ ಎರಡನೆಯ ಮಾತಿಗೆ ಒಪ್ಪಲಾರೆನು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ಅವನು ಬಂದಂಥ ದೂತರ ಮುಖಾಂತರವಾಗಿ ಬೆನ್ಹದದನಿಗೆ, “ನನ್ನ ಒಡೆಯನೇ, ಅರಸನೇ, ನಾನು ನಿನ್ನ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ. ಆದರೆ ಎರಡನೆಯ ಮಾತಿಗೆ ಒಪ್ಪಲಾರೆನು” ಎಂದು ಹೇಳಿ ಕಳುಹಿಸಿದನು. ದೂತರು ಬಂದು ಈ ಮಾತನ್ನು ಬೆನ್ಹದದನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ ಅವನು ಬಂದಂಥ ದೂತರ ಮುಖಾಂತರ ಬೆನ್ಹದದನಿಗೆ, “ನನ್ನ ಒಡೆಯರೇ, ಅರಸರೇ, ನಾನು ನಿಮ್ಮ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ; ಆದರೆ ಎರಡನೆಯ ಮಾತಿಗೆ ಒಪ್ಪಲಾರೆ,” ಎಂದು ಹೇಳಿಕಳುಹಿಸಿದನು ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಹಾಬನು ಬೆನ್ಹದದನ ಸಂದೇಶಕರಿಗೆ, “ನನ್ನ ಒಡೆಯನಾದ ರಾಜನಿಗೆ ಇದನ್ನು ತಿಳಿಸಿರಿ: ನೀನು ಮೊದಲು ಹೇಳಿದ್ದನ್ನು ನಾನು ಮಾಡುತ್ತೇನೆ. ಆದರೆ ನಿನ್ನ ಎರಡನೆಯ ಆಜ್ಞೆಯನ್ನು ನೆರವೇರಿಸಲು ನನ್ನಿಂದ ಸಾಧ್ಯವಿಲ್ಲ” ಎಂದು ಹೇಳಿದನು. ರಾಜನಾದ ಬೆನ್ಹದದನ ಜನರು ಈ ಸಂದೇಶವನ್ನು ರಾಜನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ಅವನು ಬೆನ್ಹದದನ ದೂತರಿಗೆ, “ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನೆಂದರೆ, ‘ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು. ಆದರೆ ಈ ಸಾರಿ ಹೇಳಿದ ಕಾರ್ಯವನ್ನು ನಾನು ಮಾಡಲಾರೆ,’ ಎಂದು ಹೇಳಿರಿ,” ಎಂದನು. ದೂತರು ಹೋಗಿ ಈ ಮಾತುಗಳನ್ನು ಬೆನ್ಹದದನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:9
3 ತಿಳಿವುಗಳ ಹೋಲಿಕೆ  

ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿ ಅವನಿಗೆ -


ಎಲ್ಲಾ ಹಿರಿಯರೂ ಜನರೂ ಅವನಿಗೆ - ನೀನು ಈ ಮಾತಿಗೆ ಒಪ್ಪಬೇಡ ಅಂದರು.


ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದಾಗ ಅವನು ಅಹಾಬನಿಗೆ - ಸಮಾರ್ಯಪಟ್ಟಣದ ನಾಶನದಿಂದುಂಟಾಗುವ ಧೂಳು ಲೆಕ್ಕವಿಲ್ಲದ ನನ್ನ ಸೈನಿಕರ ಹಿಡಿತುಂಬವಷ್ಟಿದ್ದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು