Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:11 - ಕನ್ನಡ ಸತ್ಯವೇದವು J.V. (BSI)

11 ಅವನ ಊರಿನ ಹಿರಿಯರೂ ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಊರಿನ ಹಿರಿಯರು ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಜ್ರೇಲಿನ ಹಿರಿಯರು ಮತ್ತು ಪ್ರಮುಖರಾದ ಜನರು ಆ ಆಜ್ಞೆಗನುಸಾರವಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಅವನ ಪಟ್ಟಣದ ಮನುಷ್ಯರೂ, ಅವನ ಪಟ್ಟಣದ ನಿವಾಸಿಗಳೂ ಆದ ಹಿರಿಯರೂ, ಗೌರವಸ್ಥರೂ, ಈಜೆಬೆಲಳು ಅವರಿಗೆ ಕಳುಹಿಸಿದ ಪ್ರಕಾರವೂ, ಅವಳು ಅವರ ಬಳಿಗೆ ಕಳುಹಿಸಿದ ಪತ್ರಗಳಲ್ಲಿ ಬರೆದ ಪ್ರಕಾರವೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:11
20 ತಿಳಿವುಗಳ ಹೋಲಿಕೆ  

ಪೇತ್ರನೂ ಉಳಿದ ಅಪೊಸ್ತಲರೂ - ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಅದಕ್ಕೆ ಪೇತ್ರ ಯೋಹಾನರು ಅವರಿಗೆ - ದೇವರ ಮಾತನ್ನು ಕೇಳುವದಕ್ಕಿಂತಲೂ ನಿಮ್ಮ ಮಾತನ್ನು ಕೇಳುವದು ದೇವರ ಮುಂದೆ ನ್ಯಾಯವೋ ಏನು? ನೀವೇ ತೀರ್ಪುಮಾಡಿಕೊಳ್ಳಿರಿ;


ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಆಮೇಲೆ ದೇವರು ಕನಸಿನಲ್ಲಿ ಅವರಿಗೆ - ನೀವು ಹೆರೋದನ ಬಳಿಗೆ ತಿರಿಗೆ ಹೋಗಬಾರದೆಂದು ಅಪ್ಪಣೆಕೊಟ್ಟದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ ಅದು [ದೇವರ] ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು; ನ್ಯಾಯತೀರ್ಪು ಯೆಹೋವನಿಂದಲೇ ಆಗುವದು.


ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ಅರಸನು ಕುತೂಹಲದಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ; ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು ಎಂದು ಹೇಳಿದರು.


ನೀವು ತಿರುಗಿಕೊಂಡು ಯೆಹೋವನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ ಎಂದು ಹೇಳಿ ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯೆಹೋವನ ಯಾಜಕರ ಮೇಲೆ ಕೈಹಾಕುವದಕ್ಕೆ ಮನಸ್ಸುಮಾಡಲಿಲ್ಲ.


ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಅವರು ದೇವರಿಗೆ ಭಯಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯನ್ನುಂಟುಮಾಡಿದನು. ಇದಲ್ಲದೆ ಇಸ್ರಾಯೇಲ್ಯರು ಹೆಚ್ಚಿ ಬಲಗೊಂಡರು.


ಆದರೆ ಸೂಲಗಿತ್ತಿಯರು ದೇವರಿಗೆ ಭಯಪಡುವವರಾದದರಿಂದ ಐಗುಪ್ತ್ಯರ ಅರಸನ ಮಾತಿನಂತೆ ಮಾಡದೆ ಗಂಡುಮಕ್ಕಳನ್ನೂ ಉಳಿಸಿದರು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬದಾಗಿ ಇಬ್ಬರು ದುಷ್ಟ ಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿ ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ ಎಂದು ಬರೆದಿದ್ದಳು.


ಅವರು ಉಪವಾಸವನ್ನು ಪ್ರಕಟಿಸಿ ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು.


ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು