1 ಅರಸುಗಳು 21:13 - ಕನ್ನಡ ಸತ್ಯವೇದವು J.V. (BSI)13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅಧ್ಯಾಯವನ್ನು ನೋಡಿ |
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.