Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:14 - ಕನ್ನಡ ಸತ್ಯವೇದವು J.V. (BSI)

14 ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾಯಕರು ಈಜೆಬೆಲಳಿಗೆ ಒಂದು ಸಂದೇಶವನ್ನು ಕಳುಹಿಸಿದರು. ಆ ಸಂದೇಶವು ಹೀಗಿತ್ತು: “ನಾಬೋತನನ್ನು ಕೊಂದುಹಾಕಲಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಸತ್ತನು. ಅವರು ಈಜೆಬೆಲಳಿಗೆ, “ನಾಬೋತನು ಕಲ್ಲೆಸೆತದಿಂದ ಸತ್ತನು,” ಎಂದು ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:14
6 ತಿಳಿವುಗಳ ಹೋಲಿಕೆ  

ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವೊಂದುಂಟು; ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟರಿಗೆ ಆಗುವದು, ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವದು; ಇದೂ ವ್ಯರ್ಥವೆಂದು ನಾನು ಹೇಳಿದೆನು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಆಕೆಯು ಇದನ್ನು ಕೇಳಿ ಅಹಾಬನಿಗೆ - ನೀನು ಹೋಗಿ ನಾಬೋತನು ಮಾರುವದಿಲ್ಲವೆಂದು ಹೇಳಿದ ದ್ರಾಕ್ಷೇತೋಟವನ್ನು ಸ್ವಾಧೀನಮಾಡಿಕೋ; ಅವನು ಜೀವದಿಂದಿಲ್ಲ, ಸತ್ತನು ಎಂದು ಹೇಳಿದಳು.


ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ಮುಟ್ಟಿದಾಗ ಅವನು - ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಲಿನ ಹತ್ತಿರ ಎರಡು ರಾಶಿಗಳಾಗಿ ಹಾಕಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು