1 ಅರಸುಗಳು 21:19 - ಕನ್ನಡ ಸತ್ಯವೇದವು J.V. (BSI)19 ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿ |
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.