1 ಅರಸುಗಳು 21:2 - ಕನ್ನಡ ಸತ್ಯವೇದವು J.V. (BSI)2 ಅಹಾಬನು ನಾಬೋತನಿಗೆ - ನಿನ್ನ ದ್ರಾಕ್ಷೇತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಒಂದು ದಿನ ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು. ನಾನು ಅದನ್ನು ತರಕಾರಿಯ ತೋಟವನ್ನಾಗಿ ಮಾಡುವೆನು. ನಿನ್ನ ದ್ರಾಕ್ಷಿತೋಟವು ನನ್ನ ಅರಮನೆಯ ಹತ್ತಿರದಲ್ಲಿದೆ. ನಾನು ಅದಕ್ಕೆ ಬದಲಾಗಿ ಒಂದು ಉತ್ತಮ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ನೀನು ಬಯಸಿದರೆ, ನಾನು ಅದರ ಬೆಲೆಯನ್ನು ಹಣದ ರೂಪದಲ್ಲಿ ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಹಾಬನು ನಾಬೋತನಿಗೆ, “ತೋಟವು ನನ್ನ ಮನೆಯ ಬಳಿಯಲ್ಲಿ ಇರುವುದರಿಂದ ಅದು ನನಗೆ ಕಾಯಿಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು. ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೆಯ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ಇಲ್ಲವೆ ನಿನ್ನ ದೃಷ್ಟಿಗೆ ಒಳ್ಳೆಯದಾಗಿದ್ದರೆ, ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿ |