1 ಅರಸುಗಳು 21:21 - ಕನ್ನಡ ಸತ್ಯವೇದವು J.V. (BSI)21 ಯೆಹೋವನು ನಿನ್ನನ್ನು ಕುರಿತು - ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ಕಡಿದುಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದ್ದರಿಂದ ಯೆಹೋವನು ನಿನಗೆ, ‘ನಾನು ನಿನ್ನನ್ನು ನಾಶಪಡಿಸುತ್ತೇನೆ. ನಿನ್ನನ್ನು ಮತ್ತು ನಿನ್ನ ಕುಟುಂಬದ ಪ್ರತಿಯೊಬ್ಬ ಗಂಡಸರನ್ನು ನಾನು ಕೊಂದುಹಾಕುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ, ನಿನ್ನ ಸಂತತಿಯನ್ನು ತೆಗೆದುಹಾಕಿ, ಅಹಾಬನಿಗೆ ಒಬ್ಬ ಗಂಡು ಮಗುವನ್ನಾದರೂ ಉಳಿಸದೆ ಇಸ್ರಾಯೇಲಿನಲ್ಲಿ ಎಲ್ಲರನ್ನು ತೆಗೆದುಹಾಕಿಬಿಡುವೆನು. ಅಧ್ಯಾಯವನ್ನು ನೋಡಿ |