Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:25 - ಕನ್ನಡ ಸತ್ಯವೇದವು J.V. (BSI)

25 ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:25
26 ತಿಳಿವುಗಳ ಹೋಲಿಕೆ  

ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ; ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ನಿಮ್ಮ ನರಭಾವದ ಬಲಹೀನತೆಯ ದೆಸೆಯಿಂದ ಲೋಕರೀತಿಯಾಗಿ ಮಾತಾಡುತ್ತೇನೆ. ಅಧರ್ಮಮಾಡುವದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ ಅಧರ್ಮಕ್ಕೂ ದಾಸರನ್ನಾಗಿ ಒಪ್ಪಿಸಿಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.


ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.


ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ - ನೀನು ಇಸ್ರಾಯೇಲ್ಯರ ಅರಸನೋ; ಎದ್ದು ಊಟಮಾಡಿ ಸಂತೋಷದಿಂದಿರು; ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂದು ನುಡಿದು


ಜನರನ್ನೂ ಹಿರಿಯರನ್ನೂ ಶಾಸ್ತ್ರಿಗಳನ್ನೂ ರೇಗಿಸಿದರು; ಮತ್ತು ಬಂದು ಅವನನ್ನು ಹಿಡಿದು ಹಿರೀಸಭೆಗೆ ತೆಗೆದುಕೊಂಡು ಹೋಗಿ


ಯೆಹೋವನ ಈ ಮಾತನ್ನು ಕೇಳಿರಿ, ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆ ಮಾಡುವೆನು.


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಟ್ಟರು; ಯೆಹೋವನ ದೃಷ್ಟಿಯಲ್ಲಿ ಕೆಟ್ಟವುಗಳಾಗಿರುವ ಕಣಿಹೇಳುವದು, ಯಂತ್ರಮಂತ್ರಗಳನ್ನು ಮಾಡುವದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ಮಾರಿಬಿಟ್ಟು ಆತನಿಗೆ ಕೋಪವನ್ನೆಬ್ಬಿಸಿದರು.


ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು.


(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಧರ್ಮಶಾಸ್ತ್ರವು ಪಾರಮಾರ್ಥಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ ಪಾಪದ ಸ್ವಾಧೀನದಲ್ಲಿರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.


ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ.


ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅನಂತರ ಅವನು ಅರಮನೆಯೊಳಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ - ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿಕೊಂಡು ಸಮಾಧಿಮಾಡಿರಿ; ಆಕೆಯು ರಾಜಪುತ್ರಿಯಾಗಿರುತ್ತಾಳಷ್ಟೆ ಎಂದು ಆಜ್ಞಾಪಿಸಿದನು.


ಅದಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಕನ್ನಿಕೆಗಳನ್ನು ತೆಗೆದುಕೊಳ್ಳುವದಕ್ಕೆ ಆಸ್ಪದವುಂಟಾಗುವದು; ತರುವಾಯ ಆ ಸೊಸೆಯರು ತೌರಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.


ಇವನು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನೂ ಆಗಿದ್ದನು.


ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ಯರ ದೇವರಾದ ಯೆಹೋವನನ್ನು ರೇಗಿಸಿದನು.


ಯೋರಾಮನು ಅವನನ್ನು ಕಂಡ ಕೂಡಲೆ - ಯೇಹುವೇ, ಶುಭವೋ ಎಂದು ಅವನನ್ನು ಕೇಳಿದನು. ಅದಕ್ಕೆ ಅವನು - ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವದು ಎಂದು ಉತ್ತರಕೊಟ್ಟನು.


ಅಂಥ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್‍ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ. ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ; ಅವನು ತನ್ನ ದೇವರಿಗೆ ವಿಶೇಷ ಪ್ರಿಯನು; ಆದದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ನೇವಿುಸಿದನು. ಆದರೂ ಅನ್ಯದೇಶಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು