ಬೆನ್ಹದದನು ಅವನಿಗೆ - ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರ್ಯದಲ್ಲಿ ಮಾಡಿದಂತೆ ನೀನೂ ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ಮಾಡಿಸಿಕೊಳ್ಳಬಹುದು ಎಂದು ಹೇಳಲು ಅಹಾಬನು - ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿ ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.