Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:15 - ಕನ್ನಡ ಸತ್ಯವೇದವು J.V. (BSI)

15 ಅವನು ಅರಸನ ಬಳಿಗೆ ಬಂದಾಗ ಅರಸನು - ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವನು - ಹೋಗಬಹುದು, ಕೃತಾರ್ಥನಾಗಿ ಬರುವಿ; ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:15
11 ತಿಳಿವುಗಳ ಹೋಲಿಕೆ  

ತರುವಾಯ ಶಿಷ್ಯರ ಬಳಿಗೆ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಇಗೋ, ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ.


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಅವನು ಅರಸನ ಬಳಿಗೆ ಬಂದಾಗ ಅರಸನು - ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವನು - ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶರಾಗುವರು ಎಂದು ಹೇಳಿದನು.


ಎಲೀಷನು ಇಸ್ರಾಯೇಲ್ಯರ ಅರಸನಿಗೆ - ನನಗೂ ನಿನಗೂ ಗೊಡವೆಯೇನು? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು ಎಂದು ಹೇಳಿದನು. ಅದಕ್ಕೆ ಇಸ್ರಾಯೇಲ್ಯರ ಅರಸನು - ಹಾಗನ್ನಬೇಡ; ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೋ ಅಂದನು.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ - ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು.


ಹೋಗಿ ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯ ಮಾಡಲಿ ಅಂದನು.


ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರುವತ್ತು ಪಟ್ಟಣಗಳಿರುವ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದು ರಾಮೋತ್ ಗಿಲ್ಯಾದಿನಲ್ಲಿ ವಾಸವಾಗಿದ್ದ ಗೆಬೆರನ ಮಗನು.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು - ರಾಮೋತ್‍ಗಿಲ್ಯಾದಿಗೆ ಹೋಗು; ನೀನು ಕೃತಾರ್ಥನಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ಆಗ ಅರಸನು ಅವನಿಗೆ - ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣಮಾಡಿಸಬೇಕು ಅನ್ನಲು ಅವನು -


ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.


ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುವವರಿಗೆ ಆದ ದರ್ಶನ ವಿುಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವದೆಂದು ಸುಮ್ಮ ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು