Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:16 - ಕನ್ನಡ ಸತ್ಯವೇದವು J.V. (BSI)

16 ಆಗ ಅರಸನು ಅವನಿಗೆ - ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣಮಾಡಿಸಬೇಕು ಅನ್ನಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣಮಾಡಿಸಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:16
14 ತಿಳಿವುಗಳ ಹೋಲಿಕೆ  

ದೆವ್ವಬಿಡಿಸುವವರೆನಿಸಿಕೊಂಡು ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದೆವ್ವಹಿಡಿದವರ ಮೇಲೆ - ಪೌಲನು ಸಾರುವ ಯೇಸುವಿನ ಆಣೆ ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವದಕ್ಕೆ ತೊಡಗಿದರು.


ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ, ನನ್ನನ್ನು ಕಾಡಬೇಡ ಎಂದು ಹೇಳಿದನು.


ಆಗ ಮಹಾಯಾಜಕನು - ನಿನಗೆ ಜೀವಸ್ವರೂಪನಾದ ದೇವರ ಆಣೆಯನ್ನು ಇಡುತ್ತೇನೆ; ನೀನು ದೇವಕುಮಾರನಾದ ಕ್ರಿಸ್ತನು ಹೌದೋ ಅಲ್ಲವೋ ಎಂಬದನ್ನು ನಮಗೆ ಹೇಳಬೇಕು ಎಂದು ಅನ್ನಲಾಗಿ ಯೇಸು -


ಆಗ ಅರಸನು ಅವನಿಗೆ - ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣ ಮಾಡಿಸಬೇಕು ಅನ್ನಲು


ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ.


ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ - ಈ ಯೆರಿಕೋ ಪಟ್ಟಣವನ್ನು ಕಟ್ಟುವದಕ್ಕೆ ಕೈ ಹಚ್ಚುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರೀ ಮಗನನ್ನೂ ಬಾಗಲುಗಳನ್ನಿಡುವಾಗ ಕಿರೀ ಮಗನನ್ನೂ ಕಳೆದುಕೊಳ್ಳಲಿ ಎಂದು ಹೇಳಿದನು.


ಅವನು ಅರಸನ ಬಳಿಗೆ ಬಂದಾಗ ಅರಸನು - ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವನು - ಹೋಗಬಹುದು, ಕೃತಾರ್ಥನಾಗಿ ಬರುವಿ; ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು ಎಂದು ಹೇಳಿದನು.


ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.


ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರತರಿಸಿ - ನಾನು ನಿನ್ನನ್ನು ಒಂದು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ ಎನ್ನಲು


ಬಿಳಾಮನು - ಅದಿರಲಿ; ನಾನು ಬಂದಿದ್ದೇನೆ; ಆದರೆ ಏನು? ಏನಾದರೂ ಹೇಳುವದಕ್ಕೆ ನನಗೆ ಶಕ್ತಿಯುಂಟೋ? ದೇವರು ಆಡಿಸುವ ಮಾತನ್ನೇ ಹೇಳುತ್ತೇನಷ್ಟೆ ಎಂದು ಹೇಳಿದನು.


ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು