Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:24 - ಕನ್ನಡ ಸತ್ಯವೇದವು J.V. (BSI)

24 ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಪ್ರವಾದಿಯಾದ ಚಿದ್ಕೀಯನು ಮೀಕಾಯೆಹುವಿನ ಹತ್ತಿರಕ್ಕೆ ಹೋಗಿ ಅವನ ಮುಖದ ಮೇಲೆ ಹೊಡೆದು, “ಯೆಹೋವನ ಆತ್ಮವು ನನ್ನನ್ನು ಬಿಟ್ಟುಹೋಗಿದೆ ಎಂಬುದನ್ನೂ ಈಗ ನಿನ್ನ ಮೂಲಕ ಮಾತನಾಡುತ್ತಿದ್ದಾನೆ ಎಂಬುದನ್ನೂ ನೀನು ನಿಜವಾಗಿಯೂ ನಂಬುವೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು, ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:24
16 ತಿಳಿವುಗಳ ಹೋಲಿಕೆ  

ಅದಕ್ಕೆ ಮಹಾಯಾಜಕನಾದ ಅನನೀಯನು - ಅವನ ಬಾಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆಕೊಡಲು


ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.


ದಣಿಗಿಂತ ಆಳು ದೊಡ್ಡವನಲ್ಲವೆಂಬದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು; ಅವರು ನನ್ನ ಮಾತನ್ನು ಕೈಕೊಂಡು ನಡೆದರೆ ನಿಮ್ಮ ಮಾತನ್ನು ಸಹ ಕೈಕೊಂಡು ನಡೆಯುವರು.


ಲೋಕವು ನಿಮ್ಮ ಮೇಲೆ ದ್ವೇಷಮಾಡುವದಾದರೆ ಅದು ಮೊದಲು ನನ್ನ ಮೇಲೆ ದ್ವೇಷಮಾಡಿತೆಂದು ತಿಳುಕೊಳ್ಳಿರಿ.


ಆಮೇಲೆ ಕೆಲವರು ಆತನನ್ನು ಉಗುಳಿ ಆತನ ಮುಖಕ್ಕೆ ಮುಸುಕುಹಾಕಿ ಗುದ್ದಿ - ಪ್ರವಾದನೆ ಹೇಳು ಅನ್ನುತ್ತಿದ್ದರು. ಮತ್ತು ಓಲೇಕಾರರು ಆತನ ಕೆನ್ನೆಗೆ ಏಟು ಹಾಕುತ್ತಾ ತಮ್ಮ ವಶಕ್ಕೆ ತೆಗೆದುಕೊಂಡರು.


ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು ಅಂದರು.


ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ [ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂದನು.


ಪೌಲನು ಅವನಿಗೆ - ಎಲೈ ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರಾನುಸಾರವಾಗಿ ನನ್ನ ವಿಚಾರಣೆ ಮಾಡುವದಕ್ಕೆ ಕೂತುಕೊಂಡು ಧರ್ಮಶಾಸ್ತ್ರ ವಿರುದ್ಧವಾಗಿ ನನ್ನನ್ನು ಹೊಡೆಯುವದಕ್ಕೆ ಅಪ್ಪಣೆಕೊಡುತ್ತೀಯೋ? ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು