Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:28 - ಕನ್ನಡ ಸತ್ಯವೇದವು J.V. (BSI)

28 ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, “ನಾನು ಏನು ಹೇಳುತ್ತೇನೆಂಬುದನ್ನು ಜನರೆಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಈ ಹೋರಾಟದಿಂದ ಜೀವಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:28
15 ತಿಳಿವುಗಳ ಹೋಲಿಕೆ  

ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ.


ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳುಕೊಳ್ಳಬೇಕು.


ದಾವೀದನೇ ಆತನನ್ನು ಒಡೆಯನೆಂದು ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವದು ಹೇಗೆ? ಎಂದು ಕೇಳಿದನು.


ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.


ಆಗ ಎಲೀಯನು ಅವನಿಗೆ - ನಾನು ದೇವರ ಮನುಷ್ಯನಾಗಿರುವದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿಯು ಬಂದು ಅವನನ್ನೂ ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.


ಅದಕ್ಕೆ ಎಲೀಯನು - ನಾನು ದೇವರ ಮನುಷ್ಯನಾಗಿರುವದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ ಅಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.


ಆದರೆ ನಾನು ನಿನ್ನ ಮತ್ತು ಸಕಲಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು