Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:34 - ಕನ್ನಡ ಸತ್ಯವೇದವು J.V. (BSI)

34 ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿನಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ - ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸಿರಿಯಾದವರ ಸೈನಿಕನೊಬ್ಬನು ಯಾರಿಗೂ ಗುರಿಯಿಡದೆ ಬಾಣವನ್ನೆಸೆದನು. ಆ ಬಾಣ ಇಸ್ರಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:34
11 ತಿಳಿವುಗಳ ಹೋಲಿಕೆ  

ಅಲ್ಲಿ ಬಿಲ್ಲುಗಾರರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ - ನನಗೆ ದೊಡ್ಡ ಗಾಯವಾಯಿತು. ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ ಅಂದನು.


ಆದಕಾರಣ, [ಯೆರೂಸಲೇಮೇ,] ನಿನಗೆ ಕ್ರೂರವಾದ ಪೆಟ್ಟುಹಾಕುವೆನು. ನಿನ್ನ ಪಾಪಗಳ ನಿವಿುತ್ತ ನಿನ್ನನ್ನು ಹಾಳುಮಾಡುವೆನು.


ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದ ಹಾಗೆ ಇತ್ತು.


ಕೈಯನ್ನು ಚೀಲದಲ್ಲಿ ಹಾಕಿ ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು; ಅವನು ಬೋರಲಬಿದ್ದನು.


ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.


ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿಕೊಂಡು ರಥದಲ್ಲಿ ಬಿದ್ದನು.


ಅಬ್ಷಾಲೋಮನು ಯೆರೂಸಲೇವಿುನಿಂದ ಸಮಾರಾಧನೆಗೆಂದು ಇನ್ನೂರು ಜನರನ್ನು ಕರಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು; ಅವರಿಗೇನೂ ಗೊತ್ತಿರಲಿಲ್ಲ.


ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.


ಅವನು ಕೂಗಿಕೊಂಡನು; ಆಗ ಇವನು ಇಸ್ರಾಯೇಲ್ಯರ ಅರಸನಲ್ಲವೆಂಬದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.


ಆದರೂ ಆ ದಿವಸ ಯುದ್ಧವು ಬಹುಘೋರವಾಗಿದ್ದದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು