Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:37 - ಕನ್ನಡ ಸತ್ಯವೇದವು J.V. (BSI)

37 ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅರಸನ ಶವವನ್ನು ಸಮಾರಿಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ರಾಜನಾದ ಅಹಾಬನು ಈ ರೀತಿಯಲ್ಲಿ ಸತ್ತುಹೋದನು. ಅವನ ದೇಹವನ್ನು ಕೆಲವು ಜನರು ಸಮಾರ್ಯಕ್ಕೆ ತೆಗೆದುಕೊಂಡು ಹೋದರು. ಅವರು ಅವನನ್ನು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇಸ್ರಾಯೇಲಿನ ಅರಸನ ಶವವನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:37
7 ತಿಳಿವುಗಳ ಹೋಲಿಕೆ  

ಸೂರ್ಯಾಸ್ತಮಾನವಾದ ಕೂಡಲೆ - ಪ್ರತಿಯೊಬ್ಬನು ತನ್ನ ಪ್ರಾಂತಕ್ಕೂ ಪಟ್ಟಣಕ್ಕೂ ಹೋಗಲಿ ಎಂಬ ಕೂಗು ಇಸ್ರಾಯೇಲ್‍ಸೈನ್ಯದಲ್ಲಿ ಹಬ್ಬಿಕೊಂಡಿತು.


ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು; ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.


ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂವಿುಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯವೆಂಬ ಹೆಸರಿಟ್ಟನು.


ಪ್ರವಾದಿಯು ಅರಸನಿಗೆ - ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ದುಷ್ಟನ ಕೆಡುಕು ಅವನನ್ನೇ ಕೊಲ್ಲುವದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ ಕಣಿಹೇಳುವವರನ್ನು ಮರುಳುಗೊಳಿಸಿ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಹುಚ್ಚುತನವಾಗಮಾಡಿ


ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುವವರಿಗೆ ಆದ ದರ್ಶನ ವಿುಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವದೆಂದು ಸುಮ್ಮ ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು