Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:39 - ಕನ್ನಡ ಸತ್ಯವೇದವು J.V. (BSI)

39 ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು ಇವುಗಳ ವಿವರವೂ ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅಹಾಬನ ಉಳಿದ ಚರಿತ್ರೆ, ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು, ಇವುಗಳ ವಿವರ, ಹಾಗು ಅವನ ಬೇರೆ ಕಾರ್ಯಸಾಧನೆಗಳು ಇಸ್ರಯೇಲರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ರಾಜನಾದ ಅಹಾಬನು ತನ್ನ ಆಳ್ವಿಕೆಯ ಕಾಲದಲ್ಲಿ ಮಾಡಿದ ಸಂಗತಿಗಳನ್ನೆಲ್ಲಾ “ಇಸ್ರೇಲಿನ ರಾಜರುಗಳ ಇತಿಹಾಸ” ಪುಸ್ತಕದಲ್ಲಿ ಬರೆದಿದ್ದಾರೆ. ರಾಜನು ತನ್ನ ಅರಮನೆಯನ್ನು ಮತ್ತಷ್ಟು ಸುಂದರವಾಗಿ ಕಾಣುವಂತೆ ಮಾಡಲು ಬಳಸಿದ ದಂತದ ಕುರಿತಾಗಿಯೂ ಆ ಪುಸ್ತಕವು ತಿಳಿಸುತ್ತದೆ. ರಾಜನು ನಿರ್ಮಿಸಿದ ನಗರಗಳ ಬಗ್ಗೆಯೂ ಆ ಪುಸ್ತಕವು ತಿಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅಹಾಬನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ದಂತದ ಮನೆಯೂ, ಅವನು ಕಟ್ಟಿಸಿದ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:39
16 ತಿಳಿವುಗಳ ಹೋಲಿಕೆ  

ನಾನು ಚಳಿಗಾಲದ ಅರಮನೆಯನ್ನೂ ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು; ದಂತಮಂದಿರಗಳು ಹಾಳಾಗುವವು, ಮಹಾಸೌಧಗಳು ಕೊನೆಗಾಣುವವು; ಇದು ಯೆಹೋವನ ನುಡಿ.


ದಂತದ ಮಂಚಗಳ ಮೇಲೆ ಮಲಗುತ್ತಾರೆ, ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ; ಹಿಂಡಿನ ಮರಿಗಳನ್ನೂ ಕೊಟ್ಟಿಗೆಯ ಕರುಗಳನ್ನೂ ತಿನ್ನುತ್ತಾರೆ;


ದೇದಾನಿನವರು ನಿನ್ನ ವರ್ತಕರು; ಬಹು ದ್ವೀಪಗಳ ಉತ್ಪತ್ತಿಯು ನಿನ್ನ ಕೈಗೆ ಸೇರಿತು; ಗಜದಂತಗಳನ್ನೂ ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸಿದರು.


ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಹುಟ್ಟುಗಳನ್ನು ರೂಪಿಸಿ ಕಿತ್ತೀಮ್ ದ್ವೀಪದ ತಿಲಕದ ಹಲಿಗೆಯಿಂದ ನಿನ್ನ ಮೇಲ್ಮಾಳಿಗೆಯನ್ನು ಕಟ್ಟಿ ದಂತದಿಂದ ಕೆತ್ತಿದರು.


ನಿನ್ನ ದಿವ್ಯಾಂಬರಗಳು ರಕ್ತಬೋಳ ಅಗರು ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತಮಂದಿರಗಳೊಳಗೆ ಉತ್ಕೃಷ್ಟವಾದ್ಯಗಳು ನಿನ್ನನ್ನು ಆನಂದಗೊಳಿಸುವವು.


ಇವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಜಿಮ್ರಿಯ ಉಳಿದ ಚರಿತ್ರೆಯೂ ಅವನ ಒಳಸಂಚೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜ ಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಪಟ್ಟಣಗಳನ್ನು ಕಟ್ಟಿಸಿದ ಸಂಗತಿ ಇವುಗಳೂ ಅವನ ಇತರ ಕ್ರಿಯೆಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು;


ಅಹಾಬನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬವನು ಅರಸನಾದನು.


ಅಹಜ್ಯನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಇಸ್ರಾಯೇಲ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಶಲ್ಲೂಮನ ಉಳಿದ ಚರಿತ್ರೆಯೂ ಅವನ ಒಳಸಂಚಿನ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು