Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:43 - ಕನ್ನಡ ಸತ್ಯವೇದವು J.V. (BSI)

43 ಇವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ ಪೂಜಾಸ್ಥಳಗಳನ್ನು ಹಾಳು ಮಾಡಲಿಲ್ಲ; ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಸುಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ತನ್ನ ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ, ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಬಲಿಕೊಡುತ್ತಾ, ಧೂಪಾರತಿ ಎತ್ತುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಯೆಹೋಷಾಫಾಟನು ಒಳ್ಳೆಯವನಾಗಿದ್ದನು. ಅವನು ತನ್ನ ತಂದೆಯ ಮಾರ್ಗವನ್ನು ಅನುಸರಿಸಿದನು. ಯೆಹೋವನು ಅಪೇಕ್ಷಿಸಿದವುಗಳಿಗೆಲ್ಲ ಅವನು ವಿಧೇಯನಾಗಿದ್ದನು. ಆದರೆ ಯೆಹೋಷಾಫಾಟನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾ ಧೂಪಹಾಕುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:43
25 ತಿಳಿವುಗಳ ಹೋಲಿಕೆ  

ಇವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಯೆಹೋವನಿಗೆ ನಡೆದುಕೊಂಡನು.


ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ; ನಿನ್ನ ಕಾಲನ್ನು ಕೇಡಿಗೆ ದೂರಮಾಡು.


ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.


ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.


ಯಾವನು ಅಹಂಕಾರಿಗಳಲ್ಲಿಯೂ ಸುಳ್ಳನ್ನು ಹಿಂಬಾಲಿಸುವವರಲ್ಲಿಯೂ ಸೇರದೆ ಯೆಹೋವನನ್ನೇ ನಂಬುತ್ತಾನೋ ಅವನೇ ಧನ್ಯನು.


ಇಸ್ರಾಯೇಲ್‍ಪ್ರಾಂತದಲ್ಲಿದ್ದ ಪೂಜಾಸ್ಥಳಗಳು ತೆಗೆದುಹಾಕಲ್ಪಡದಿದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.


ಆಸನು ಓಬೇದನ [ಮಗನಾದ ಅಜರ್ಯನ] ಈ ಪ್ರವಾದನೋಕ್ತಿಗಳನ್ನು ಕೇಳಿದಾಗ ಧೈರ್ಯಗೊಂಡು ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದುಹಾಕಿ ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಆತನ ಯಜ್ಞವೇದಿಯನ್ನು ಜೀರ್ಣೋದ್ಧಾರಮಾಡಿಸಿದನು.


ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ಒಂದು ವೇಳೆ ನೀವು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಯೆರೂಸಲೇವಿುನ ಯಜ್ಞವೇದಿಯ ಮುಂದೆಯೇ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಇವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ಯೆರೂಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದನು.


ಪಿತೃಗಳಂತೆಯೇ ಅವರೂ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿನ್ನೆಯ ಮೇಲೆಯೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆಯೂ ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹದ ಬಸವನನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದನು.


ಆವರೆಗೂ ಯೆಹೋವನಾಮಕ್ಕೋಸ್ಕರ ಆಲಯವಿರಲಿಲ್ಲವಾದದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞಮಾಡುತ್ತಿದ್ದರು.


ಅವನು ಅರಸನಾದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಇಪ್ಪತ್ತೈದು ವರುಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಇವನ ತಾಯಿ.


ಜ್ಞಾನಿಯಾದ ಮಗನು ತಂದೆಯ ಶಿಕ್ಷೆಯನ್ನು ಕೇಳುವನು: ಧರ್ಮನಿಂದಕನೋ ಗದರಿಕೆಯನ್ನು ಕೇಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು