Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:1 - ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ ಯೆಹೋವನ ಆಲಯವನ್ನೂ ಯೆರೂಸಲೇವಿುನ ಸುತ್ತಣ ಗೋಡೆಯನ್ನೂ ಕಟ್ಟಿ ತೀರಿಸುವ ತನಕ ಆಕೆಯನ್ನು ದಾವೀದನ ನಗರದಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ, ಯೆಹೋವನ ಆಲಯವನ್ನೂ ಮತ್ತು ಯೆರೂಸಲೇಮಿನ ಸುತ್ತಣ ಗೋಡೆಯನ್ನೂ ಕಟ್ಟಿ ಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೊಲೊಮೋನನು ಈಜಿಪ್ಟಿನ ಅರಸ ಫರೋಹನ ಮಗಳನ್ನು ಮದುವೆಮಾಡಿಕೊಂಡು ಅವನ ಅಳಿಯನಾದ. ತನ್ನ ಅರಮನೆಯನ್ನು, ಸರ್ವೇಶ್ವರನ ಮಹಾದೇವಾಲಯವನ್ನು ಹಾಗು ಜೆರುಸಲೇಮಿನ ಸುತ್ತಣ ಗೋಡೆಯನ್ನು ಕಟ್ಟಿಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲೇ ಇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೊಲೊಮೋನನು ಈಜಿಪ್ಟಿನ ರಾಜನಾದ ಫರೋಹನ ಮಗಳನ್ನು ಮದುವೆಯಾಗಿ ಅವನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಸೊಲೊಮೋನನು ಅವಳನ್ನು ದಾವೀದನಗರಕ್ಕೆ ಕರೆದು ತಂದನು. ಸೊಲೊಮೋನನು ಆ ಸಮಯದಲ್ಲಿ ತನ್ನ ಅರಮನೆಯನ್ನು ಮತ್ತು ಯೆಹೋವನ ದೇವಾಲಯಗಳನ್ನು ನಿರ್ಮಿಸುತ್ತಿದ್ದನು. ಜೆರುಸಲೇಮಿನ ಸುತ್ತಲೂ ಒಂದು ಗೋಡೆಯನ್ನು ಸಹ ಸೊಲೊಮೋನನು ನಿರ್ಮಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೊಲೊಮೋನನು ಈಜಿಪ್ಟಿನ ಅರಸನಾದ ಫರೋಹನ ಸಂಗಡ ಬಂಧುತ್ವ ಮಾಡಿ, ಫರೋಹನ ಮಗಳನ್ನು ಮದುವೆಮಾಡಿಕೊಂಡನು. ಅವನು ತನ್ನ ಮನೆಯನ್ನೂ, ಯೆಹೋವ ದೇವರ ಆಲಯವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಸುತ್ತಲೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:1
17 ತಿಳಿವುಗಳ ಹೋಲಿಕೆ  

ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು;


ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಸ್ತ್ರೀಯರನ್ನೂ ಮೋಹಿಸಿದನು.


ಸೊಲೊಮೋನನು - ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವು ಪವಿತ್ರಸ್ಥಾನಗಳೇ; ಆದದರಿಂದ ಇಸ್ರಾಯೇಲ್ಯರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಮಗಳಾದ ನನ್ನ ಹೆಂಡತಿಯು ವಾಸಿಸಬಾರದು ಅಂದುಕೊಂಡು ಆಕೆಯನ್ನು ದಾವೀದನಗರದಿಂದ ತಾನು ಆಕೆಗೋಸ್ಕರ ಕಟ್ಟಿಸಿದ ಮಂದಿರಕ್ಕೆ ಕರಕೊಂಡು ಬಂದನು.


ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ ನಾನೂರ ಎಂಭತ್ತನೆಯ ವರುಷದ ಅಂದರೆ ಇಸ್ರಾಯೇಲ್ಯರ ಅರಸನಾದ ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಾದ ವೈಶಾಖಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿದನು.


ಆದರೂ ಅವನು ಈಗ ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.


ಅವರು ನಮಗೆ - ನಾವು ಪರಲೋಕ ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರುಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರಿಗಿ ಕಟ್ಟುತ್ತಿರುತ್ತೇವೆ. ಇಸ್ರಾಯೇಲ್ಯರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿ ತೀರಿಸಿದ್ದನು.


ಯೆಹೋಷಾಫಾಟನಿಗೆ ಬಹಳ ಧನಘನತೆಗಳುಂಟಾದವು. ಅವನು ಅಹಾಬನೊಡನೆ ಬೀಗತನಮಾಡಿ


ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ದಾವೀದನಗರವೆಂದು ಹೆಸರಾಯಿತು.


ಹೀಗಿರುವಲ್ಲಿ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿ ಬಿಡುವಿಯಲ್ಲವೋ?


ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು


ನ್ಯಾಯಮಂದಿರದ ಹಿಂದಿನ ಪ್ರಾಕಾರಗಳಲ್ಲಿ ತನಗೋಸ್ಕರ ಅರಮನೆಯನ್ನೂ ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನೂ ಕಟ್ಟಿಸಿದನು. ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.


ಅರಸನಾದ ಸೊಲೊಮೋನನು ಇಪ್ಪತ್ತು ವರುಷಗಳಲ್ಲಿ ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದ ನಂತರ


ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.


ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಸಿದನಂತರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು