Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:15 - ಕನ್ನಡ ಸತ್ಯವೇದವು J.V. (BSI)

15 ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇವಿುಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿ ತನ್ನ ಎಲ್ಲಾ ಸೇವಕರಿಗೋಸ್ಕರ ಔತಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು, ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ತನ್ನ ಸೇವಕರಿಗೆ ಔತಣವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:15
20 ತಿಳಿವುಗಳ ಹೋಲಿಕೆ  

ಬತ್ತಿಹೋಗಿದ್ದ ಈ ತೆನೆಗಳು ಆ ಏಳು ಒಳ್ಳೇ ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಹೀಗೆ ಕಾಣಿಸುವಷ್ಟರಲ್ಲಿ ಫರೋಹನು ಎಚ್ಚತ್ತು ಅದನ್ನು ಕನಸೆಂದು ತಿಳುಕೊಂಡನು.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಹೀಗಿರಲಾಗಿ ಅವಳಿಗೆ ಅನುಕೂಲವಾದ ದಿವಸ ಬಂತು; ಹೇಗಂದರೆ ಹೆರೋದನು ತಾನು ಹುಟ್ಟಿದ ದಿವಸದಲ್ಲಿ ಪ್ರಭುಗಳಿಗೂ ಸಹಸ್ರಾಧಿಪತಿಗಳಿಗೂ ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಮಾಡಿಸಿದಾಗ


ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಮಾಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.


ಎಲ್ಲಾ ಸರದಾರರಿಗೋಸ್ಕರವೂ ಪರಿವಾರದವರಿಗೋಸ್ಕರವೂ ಔತಣಮಾಡಿಸಿದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ ಪ್ರಧಾನರೂ ಸಂಸ್ಥಾನಾಧಿಕಾರಿಗಳೂ ಅವನ ಸನ್ನಿಧಿಗೆ ಬಂದಿದ್ದರು.


(ಇದಾದ ಮೇಲೆ ನಾನು ಎಚ್ಚತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.)


ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ದೇವಾಲಯವನ್ನು ಪ್ರತಿಷ್ಠಿಸಿದರು.


ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಆಲಯವನ್ನು ಪ್ರತಿಷ್ಠಿಸಿದರು.


ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯಭಕ್ಷ್ಯಕಾರನನ್ನೂ ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.


ಇದಲ್ಲದೆ ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲೆ ಇದ್ದರು.


ಯಾಕೋಬನು ನಿದ್ದೆಯಿಂದ ಎಚ್ಚತ್ತು - ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ಇದ್ದಾನೆ;


ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಅದೇ ಕಾಲದಲ್ಲಿ ಇಬ್ಬರು ಸೂಳೆಯರು ಅರಸನ ಸನ್ನಿಧಿಗೆ ಬಂದರು.


ಅವರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ದ್ರಾಕ್ಷೇಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು