1 ಅರಸುಗಳು 3:28 - ಕನ್ನಡ ಸತ್ಯವೇದವು J.V. (BSI)28 ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು. ಅಧ್ಯಾಯವನ್ನು ನೋಡಿ |