Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:5 - ಕನ್ನಡ ಸತ್ಯವೇದವು J.V. (BSI)

5 ದೇವರಾದ ಯೆಹೋವನು ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡು - ನಿನಗೆ ಯಾವ ವರ ಬೇಕು ಕೇಳಿಕೋ ಎಂದು ಹೇಳಲು ಸೊಲೊಮೋನನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನುಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿಯಲ್ಲಿ ಸ್ವಪ್ನದೊಳಗೆ ಯೆಹೋವ ದೇವರು ಸೊಲೊಮೋನನಿಗೆ ಕಾಣಿಸಿಕೊಂಡರು. ದೇವರು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:5
18 ತಿಳಿವುಗಳ ಹೋಲಿಕೆ  

ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.


ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಆತನು ಅವರನ್ನು - ನಿಮಗೇನು ನಡಿಸಿಕೊಡಬೇಕು ಎಂದು ಕೇಳಲು ಅವರು -


ಅವರು ಹೋದ ಮೇಲೆ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ನೀನು ಎದ್ದು ಈ ಕೂಸನ್ನೂ ಇದರ ತಾಯಿಯನ್ನೂ ಕರಕೊಂಡು ಐಗುಪ್ತದೇಶಕ್ಕೆ ಓಡಿಹೋಗಿ ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಅಂದನು.


ಇಸ್ರಾಯೇಲ್‍ದೇವರಾದ ಯೆಹೋವನು ಸೊಲೊಮೋನನಿಗೆ ಎರಡು ಸಾರಿ ಕಾಣಿಸಿಕೊಂಡು


ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.


ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು -


ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.


ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವದೆಂದು ನಿಮಗೆ ಹೇಳುತ್ತೇನೆ.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಬೇಡಿಕೊಳ್ಳಿರಿ, ಅದು ನಿಮಗೆ ದೊರೆಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು