Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:8 - ಕನ್ನಡ ಸತ್ಯವೇದವು J.V. (BSI)

8 ವ್ಯವಹಾರಜ್ಞಾನವಿಲ್ಲದವನು, ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ಸೇವಕನಾದ ನಾನು, ನೀನೇ ಆರಿಸಿಕೊಂಡಿರುವ ಜನರ ನಡುವೆ ಇದ್ದೇನೆ. ಇಲ್ಲಿ ಅನೇಕಾನೇಕ ಜನರಿದ್ದಾರೆ. ಅವರನ್ನು ಎಣಿಸಲಾಗದು, ಒಬ್ಬ ಆಡಳಿತಗಾರನು ಅವರ ಮಧ್ಯದಲ್ಲಿದ್ದು ಅನೇಕ ತೀರ್ಪುಗಳನ್ನು ಮಾಡಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ನಿಮ್ಮ ಸೇವಕನಾದ ನಾನು ನೀವು ಆಯ್ದುಕೊಂಡಂಥ ಅಸಂಖ್ಯಾತ ಜನರ ಮಧ್ಯದಲ್ಲಿ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:8
12 ತಿಳಿವುಗಳ ಹೋಲಿಕೆ  

ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.


ದಾವೀದನು ಯೋವಾಬನನ್ನೂ ಜನಾಧಿಪತಿಗಳನ್ನೂ ಕರೆದು - ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ ಇಸ್ರಾಯೇಲ್ಯರನ್ನು ಲೆಕ್ಕಮಾಡಿಕೊಂಡು ಬನ್ನಿರಿ ಎಂದು ಆಜ್ಞಾಪಿಸಿದನು.


ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.


ಮರೀಕುರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವಾಸ್ತ್ಯವಾಗಿರುವ ಇಸ್ರಾಯೇಲ್ಯರನ್ನು ಸಾಕುವದಕ್ಕೆ ನೇವಿುಸಿದನು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ.


ಇಸ್ರಾಯೇಲ್ ಯೆಹೂದ್ಯರು ಸಮುದ್ರತೀರದ ಉಸುಬಿನಷ್ಟು ಅಸಂಖ್ಯರಾಗಿದ್ದರು; ಅವರು ಅನ್ನಪಾನಗಳಲ್ಲಿ ತೃಪ್ತರಾಗಿ ಸಂತೋಷದಿಂದಿದ್ದರು.


ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸಿ ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು