Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:12 - ಕನ್ನಡ ಸತ್ಯವೇದವು J.V. (BSI)

12 ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಅಡಿಯಲ್ಲಿಯೂ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್‍ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಧಿಪತಿಯಾದ ಅಹೀಲೂದನ ಮಗನಾದ ಬಾಣಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಹೀಲೂದನ ಮಗ ಬಾಣಾ ಎಂಬವನು ತಾನಕ್, ಮೆಗಿದ್ದೋ, ಬೇತ್ ಷೆಯಾನಿನ ಎಲ್ಲಾ ಕಡೆಗಳಲ್ಲಿಯೂ ಆಳಿಕೆಮಾಡುತ್ತಿದ್ದನು. ಬೇತ್ ಶಾನ್ ಚಾರೆತಾನಿನ ಪಕ್ಕದಲ್ಲಿದ್ದ ಇಜ್ರೆಯೇಲ್ ಎಂಬ ಪಟ್ಟಣದ ಕೆಳಗಿತ್ತು. ಅವನ ಪ್ರಾಂತವು ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೆ ಯೊಕ್ಮೆಯಾಮಿನಲ್ಲಿ ಅಂತ್ಯಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:12
13 ತಿಳಿವುಗಳ ಹೋಲಿಕೆ  

ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತಗಳಲ್ಲಿ ಬೇತ್‍ಷೆಯಾನ್, ಇಬ್ಲೆಯಾಮ್, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲ್ಯರ ಅರಸನನ್ನಾಗಿಯೂ ಅಬೇಲ್‍ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭೀಷೇಕಿಸು.


ಅರಸರು ಬಂದು ಯುದ್ಧಮಾಡಿದರು; ಕಾನಾನ್ಯರಾಜರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಕಾದಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.


ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಗೆಜೆರ್, ಯೊಕ್ಮೆಯಾಮ್, ಬೇತ್‍ಹೋರೋನ್,


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣುನೆಲದಲ್ಲಿ ಎರಕಹೊಯ್ಸಿದನು.


ಅವರಲ್ಲಿದ್ದ ಶೂರರೆಲ್ಲರೂ ಹೊರಟು ರಾತ್ರಿಯೆಲ್ಲಾ ನಡೆದುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.


ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು; ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.


ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಕೆದೆಷಿನ ಅರಸನು 1; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು 1;


ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ್ ಎಂಬವನಿಗೆ ಮದುವೆಮಾಡಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು