Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:24 - ಕನ್ನಡ ಸತ್ಯವೇದವು J.V. (BSI)

24 ಅವನು ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲ್ಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ರಾಜರಿಗೂ ಅಧಿಪತಿಯಾಗಿದ್ದನು. ಸುತ್ತಮುತ್ತಲಿನ ರಾಜರೊಡನೆ ಶಾಂತಿಸಮಾಧಾನದಿಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಫ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗೂ, ನದಿಯ ಈಚೆಯಲ್ಲಿರುವ ಸಮಸ್ತ ಅರಸರ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಅವನಿಗೆ ಸುತ್ತಲಿರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:24
15 ತಿಳಿವುಗಳ ಹೋಲಿಕೆ  

ನಿನಗೆ ಒಬ್ಬ ಮಗನು ಹುಟ್ಟುವನು; ಅವನು ಸಮಾಧಾನಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಣಗಿಸಿ ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವದು. ಅವನ ಕಾಲದಲ್ಲಿ ಇಸ್ರಾಯೇಲ್ಯರಿಗೆ ಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಅವನನ್ನು ಸೇವಿಸಲಿ.


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇತ್ತು.


ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಗುಡ್ಡದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.


ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ನನಗೆ ದೂರವಾಗಿದೆ.


ಸೊಲೊಮೋನನು ಯೂಫ್ರೇಟೀಸ್‍ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕೊಡುತ್ತಿದ್ದರು.


ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಸೂಳೆಯನ್ನು ಕಂಡು ಅವಳ ಬಳಿಗೆ ಹೋದನು.


ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.


ಹತ್ತು ಕಟ್ಟಿ ಮೇಯಿಸಿದ ಎತ್ತುಗಳು, ಇಪ್ಪತ್ತು ಬಿಟ್ಟು ಮೇಯಿಸಿದ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತು ದುಪ್ಪಿ, ಜಿಂಕೆ, ಸಾರಗ, ಕೊಬ್ಬಿದ ಕೋಳಿಗಳು ಇವೇ.


ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು.


ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು